Vijaypura

ಸುಪ್ರೀಂ ಕೋರ್ಟ್ ನಲ್ಲೂ ಮುಶ್ರಫ್ ಗೆ ಮುಖಭಂಗ; ಯತ್ನಾಳ ಗೆ ಮುನ್ನಡೆ

Share

ಚುನಾವಣೆಯಲ್ಲಿ ಅಕ್ರಮವೆಸಗಿದ್ದಾರೆ ಎಂದು ನನ್ನ ಮೇಲೆ ಸುಳ್ಳು ಕೇಸು ದಾಖಲು ಮಾಡಿದ್ದ ಅಬ್ದುಲ್ ಹಮೀದ್ ಖಾಜಾ ಎಂಬುವವರ ಅರ್ಜಿಯನ್ನು ಕಲ್ಬುರ್ಗಿ ಉಚ್ಚ ನ್ಯಾಯಾಲಯವು ದಿನಾಂಕ 18.07.2025 ರಂದು ವಜಾ ಮಾಡಿತ್ತು ಹಾಗೂ ಅರ್ಜಿದಾರರಿಗೆ ದಂಡ ವಿಧಿಸಿತ್ತು.

[CIVIL APPEAL No. 12194 OF 2024] ಉಚ್ಚ ನ್ಯಾಯಾಲಯದ ತೀರ್ಪನ್ನು ಖಾಜಾ ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಿದ್ದರು. ಈಗ, ಸರ್ವೋಚ್ಛ ನ್ಯಾಯಾಲಯವು ಇವರ ಅರ್ಜಿಯನ್ನು ವಜಾ ಮಾಡಿದೆ ಹಾಗೂ ದಂಡವನ್ನೂ ವಿಧಿಸಿದೆ. ಈ ರೀತಿಯಾದ ಗೊಡ್ಡು ಬೆದರಿಕೆಗಳಿಗೆ ನಾನು ಹೆದರುವವನಲ್ಲ ಹಾಗೂ ನನ್ನ ಮೇಲೆ ರಾಜಕೀಯ ಪ್ರೇರಿತ, ಆಧಾರರಹಿತ ಆರೋಪಗಳನ್ನು ಮಾಡುವವರ ವಿರುದ್ಧ ಕಾನೂನು ರೀತ್ಯ ಕ್ರಮಕೈಗೊಂಡು ಅದನ್ನು ತಾರ್ಕಿಕ ಅಂತ್ಯದ ವರೆಗೂ ಕೊಂಡೊಯುತ್ತೇನೆ. ಸತ್ಯವನ್ನು ಮರೆಮಾಚಲು ಯಾರಿಂದಲೂ ಸಾಧ್ಯವಿಲ್ಲ. ವಿಜಯಪುರದ ಜನತೆ ನನ್ನೊಂದಿಗೆ ಸದಾ ಇರುತ್ತಾರೆ ಹಾಗೂ ಅವರ ಆಶಿರ್ವಾದ ನನ್ನ ಮೇಲೆ ಸದಾ ಇರುತ್ತದೆ ಎಂಬ ಅಚಲ ವಿಶ್ವಾಸ ನನ್ನಲ್ಲಿದೆ. ನ್ಯಾಯಾಲಯದ ಸಮಯವನ್ನು ವ್ಯರ್ಥ ಮಾಡುವ ಈ ‘ರಾಜಕೀಯ ನಿರುದ್ಯೋಗಿಗಳಿಗೆ’ ನ್ಯಾಯಾಲಯ ದಂಡ ವಿಧಿಸುವ ಮೂಲಕ ಕ್ರಮ ಜರುಗಿಸಿದೆ. ಸತ್ಯ ಮೇವ ಜಯತೆ ಎಂದು ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ರವರು ತಮ್ಮ‌ ಎಕ್ಸ್ ಖಾತೆಯಲ್ಲಿ ಟ್ವಿಟ್ ಮಾಡಿದ್ದಾರೆ.

Tags:

error: Content is protected !!