ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ಬೆಂಗಳೂರಿನ ವಿಜಯನಗರದಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಅಂಗನವಾಡಿಯ ಮುದ್ದು ಮಕ್ಕಳೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಜನ್ಮದಿನವನ್ನು ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ್ ಅವರ ನೇತೃತ್ವದಲ್ಲಿ ಮಕ್ಕಳೆಲ್ಲರಿಗೂ ಕುಡಿಯುವ ನೀರಿನ ಸ್ಟೀಲ್ ಬಾಟಲ್ ಗಳನ್ನು ವಿತರಿಸಿ, ಮಕ್ಕಳಿಗೆ ಸಿಹಿ ಹಂಚಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ದೇವರು ಇನ್ನೂ ಹೆಚ್ಚಿನ ಆರೋಗ್ಯ ಅಧಿಕಾರ ಸಂಪತ್ತು ಸಂತೋಷವನ್ನು ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು, ಮುದ್ದು ಮಕ್ಕಳು ಉಪಸ್ಥಿತರಿದ್ದರು.



