ಅಖಿಲ ಭಾರತ ಕಾಂಗ್ರೆಸ್ ಸೇವಾದಳದ ಅಧ್ಯಕ್ಷರು ಹಾಗೂ ಕೆಸಿಸಿಸಿ ಅಧ್ಯಕ್ಷರ ಅನುಮೋದನೆ ಮೇರೆಗೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯ ನಿವಾಸಿ ಜುಬೇದಾ ನದಾಫ್ ಅವರನ್ನು, ಧಾರವಾಡ ಜಿಲ್ಲಾ ಕಾಂಗ್ರೆಸ್ ಸೇವಾದಳದ ಮಹಿಳಾ ಜಿಲ್ಲಾಧ್ಯಕ್ಷರಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಜುಬೇದಾ ಅವರು ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಪಕ್ಷ ನೀಡುವ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಇವರ ಕಾರ್ಯಸೇವೆ ಅವಧಿಯನ್ನು ಪರಿಗಣಿಸಿ ಸ್ಥಾನಮಾನ ನೀಡಲಾಗಿದ್ದು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾ ದಳ ರಾಜ್ಯ ಮುಖ್ಯ ಸಂಘಟಿಕ ರಾಮಚಂದ್ರ ಎಂ ಪ್ರತಿ ಹಸ್ತಾಂತರ ಮಾಡಿದರು.

