Kagawad

ಫೆಬ್ರುವರಿ ೨೭ರಂದು ವಿಜಯಪುರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಜನತಾ ಸಮಾವೇಶ – ಕೆ.ಪಿ. ಮಗೆಣ್ಣವರ್ ಮಾಹಿತಿ

Share

ದೇಶದ ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ಹಾಗೂ ಹಿಂದಿನ ಮುಖ್ಯಮಂತ್ರಿ, ಪ್ರಸ್ತುತ ಕೇಂದ್ರ ಸಚಿವರಾದ ಕುಮಾರಸ್ವಾಮಿ ಅವರು ಕರ್ನಾಟಕ ರಾಜ್ಯದ ರೈತರಿಗಾಗಿ ಅಪಾರ ಕೊಡುಗೆ ನೀಡಿದ್ದಾರೆ ಎಂದು ಚಿಕ್ಕೋಡಿ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಪಿ. ಮಗೆಣ್ಣವರ್ ತಿಳಿಸಿದ್ದಾರೆ.
ಶನಿವಾರ ಕಾಗವಾಡದಲ್ಲಿ ಜೆಡಿಎಸ್ ಪಕ್ಷದ ವತಿಯಿಂದ ಆಯೋಜಿಸಿದ್ದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆಬ್ರುವರಿ ೨೭ರಂದು ವಿಜಯಪುರದಲ್ಲಿ ಕುಮಾರಸ್ವಾಮಿ ಅವರ ಜನತಾ ಸಮಾವೇಶ ನಡೆಯಲಿದ್ದು, ಇದರ ಅಂಗವಾಗಿ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳನ್ನು ಸಭೆಗೆ ಆಹ್ವಾನಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಬೆಳಗಾವಿ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಶಂಕರ ಮಾಡಲಗಿ ಮಾತನಾಡಿ, ರಾಜ್ಯದಲ್ಲಿ ಜೆಡಿಎಸ್ ಪಕ್ಷ ಸ್ಥಾಪನೆಗೊಂಡು ೨೫ ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ವಿಜಯಪುರದಲ್ಲಿ ವಿಶೇಷ ಸಭೆ ಆಯೋಜಿಸಲಾಗಿದೆ. ಜಂತಾ ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಭಾಗವಹಿಸಬೇಕು ಎಂದು ಕರೆ ನೀಡಿದರು.

ಮಾಜಿ ಪ್ರಧಾನಮಂತ್ರಿ ದೇವೇಗೌಡ ಅವರು ಸಕ್ಕರೆ ಕಾರ್ಖಾನೆಗಳಿಗೆ ಲೈಸನ್ಸ್ ನೀಡಿದ ಪರಿಣಾಮ ಬೆಳಗಾವಿ ಜಿಲ್ಲೆಯಲ್ಲಿ ಅನೇಕ ಸಕ್ಕರೆ ಕಾರ್ಖಾನೆಗಳು ಸ್ಥಾಪನೆಯಾಗಿ, ರೈತರ ಆರ್ಥಿಕ ಸ್ಥಿತಿ ಬಲಿಷ್ಠಗೊಂಡಿದೆ ಎಂದು ಹೇಳಿದರು.

ಜೆಡಿಎಸ್ ಪಕ್ಷದ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರು ಹಾಗೂ ಅಥಣಿ ಕ್ಷೇತ್ರದ ಮಾಜಿ ಶಾಸಕ ಶಾಹಜಹಾನ್ ಡೊಂಗರಗಾವ್ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ ಪ್ರಸ್ತುತ ಕುರ್ಚಿ ಕದನ ನಡೆಯುತ್ತಿದ್ದು, ಅಭಿವೃದ್ಧಿ ವಿಚಾರದಲ್ಲಿ ಗಮನ ಹರಿಸಲಾಗುತ್ತಿಲ್ಲ. ಐದು ಗ್ಯಾರಂಟಿಗಳಿAದ ರಾಜ್ಯದ ಹಣಕಾಸು ಪರಿಸ್ಥಿತಿ ಗಂಭೀರವಾಗಿದೆ. ೨೦೨೮ರ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ-ಎನ್‌ಡಿಎ ಸರ್ಕಾರ ಅಧಿಕಾರದಲ್ಲಿ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಗುಂಜೇಗಾವಿ, ಚಿಕ್ಕೋಡಿ ಜಿಲ್ಲಾ ಎಸ್‌ಟಿ ಘಟಕದ ಅಧ್ಯಕ್ಷ ರಮೇಶ್ ನಾಯಕ್, ಜಿಲ್ಲಾ ಸಂಚಾಲಕ ಪ್ರಮೋದ್ ಪೂಜಾರಿ, ಮಾಹಂತೇಶ್ ಅವಟಿ ಸೇರಿದಂತೆ ಹಲವಾರು ಜೆಡಿಎಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

Tags:

error: Content is protected !!