• ಅಲತಗಾ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ
• ಜಾರಕಿಹೊಳಿ ಕುಟುಂಬದ ಮಾರ್ಗದರ್ಶನದಲ್ಲಿ ಸೇವೆ
• ಕ್ರೀಡಾಪಟುಗಳಿಗೆ ಬಹುಮಾನ ವಿತರಣೆ
• ಗ್ರಾಮಸ್ಥರ ಸಮ್ಮುಖದಲ್ಲಿ ಬೀಳ್ಕೊಡುಗೆ ಸಮಾರಂಭ

ಬೆಳಗಾವಿ ಜಿಲ್ಲೆಯ ಕಡೋಲಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಅಲತಗಾ ಗ್ರಾಮದಲ್ಲಿಂದು ಸಂಭ್ರಮದ ವಾತಾವರಣ ಮನೆಮಾಡಿತ್ತು. ಲೋಕೋಪಯೋಗಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರ ಆಶಯದಂತೆ ಶಾಲಾ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ವಿಶಿಷ್ಟ ಕಾರ್ಯಕ್ರಮವೊಂದು ಜರುಗಿದೆ
ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಚಿಕ್ಕೋಡಿ ಸಂಸದೆ ಕುಮಾರಿ ಪ್ರಿಯಾಂಕಾ ಜಾರಕಿಹೊಳಿ ಹಾಗೂ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರ ಮಾರ್ಗದರ್ಶನದಂತೆ, ಇಂದು ಅಲತಗಾ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಬೀಳ್ಕೊಡುಗೆ ಹಾಗೂ ಬಹುಮಾನ ವಿತರಣಾ ಸಮಾರಂಭವನ್ನು ಅರ್ಥಪೂರ್ಣವಾಗಿ ಆಯೋಜಿಸಲಾಯಿತು. ಕಡೋಲಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಈ ಶಾಲೆಯ ಪ್ರತಿಭಾವಂತ ಕ್ರೀಡಾಪಟುಗಳಿಗೆ ಸಚಿವರ ಮತ್ತು ಸಂಸದರ ಆದೇಶದ ಮೇರೆಗೆ ಬಹುಮಾನಗಳನ್ನು ವಿತರಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕ ವೃಂದ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು ಪಾಲ್ಗೊಂಡು ವಿದ್ಯಾರ್ಥಿಗಳ ಸಾಧನೆಯನ್ನು ಕೊಂಡಾಡಿದರು.
ಕಾರ್ಯಕ್ರಮದಲ್ಲಿ ಕೆಪಿಸಿಸಿ ಸದಸ್ಯರು ಹಾಗೂ ಆಪ್ತ ಸಹಾಯಕರಾದ ಮಲಗೌಡ ಕಲಗೌಡ ಪಾಟೀಲ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು. ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರ ಸಮ್ಮುಖದಲ್ಲಿ ನಡೆದ ಈ ಸಮಾರಂಭದಲ್ಲಿ ಶಾಲಾ ಸಮಿತಿ ಹಾಗೂ ಗ್ರಾಮದ ಹಿರಿಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಶಿಕ್ಷಣದ ಜೊತೆಗೆ ಕ್ರೀಡೆಗೂ ಒತ್ತು ನೀಡುತ್ತಿರುವ ಜಾರಕಿಹೊಳಿ ಕುಟುಂಬದ ಕಾಳಜಿಯನ್ನು ಈ ವೇಳೆ ಗ್ರಾಮಸ್ಥರು ಶ್ಲಾಘಿಸಿದರು. ಕ್ರೀಡಾ ಸ್ಫೂರ್ತಿಯನ್ನು ಬೆಳೆಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳು ದೇಶದ ಉತ್ತಮ ಪ್ರಜೆಗಳಾಗಬೇಕೆಂದು ಗಣ್ಯರು ಹಾರೈಸಿದರು.

