Belagavi

ಕಡೋಲಿಗೆ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಸಚಿವ ಸತೀಶ್ ಜಾರಕಿಹೊಳಿ: ಕೋಟಿ ವೆಚ್ಚದ ರಸ್ತೆ ಕಾಮಗಾರಿ ಹಾಗೂ ಕುಸ್ತಿ ಪಂದ್ಯಾವಳಿಗೆ ಚಾಲನೆ!

Share

• ಕಡೋಲಿ ಗ್ರಾಮಕ್ಕೆ ಹೆಲಿಕಾಪ್ಟರ್ ಮೂಲಕ ಸಚಿವರ ಎಂಟ್ರಿ
• ದುಂಡೇಶ್ವರ ಮಠದಲ್ಲಿ ಪೂಜೆ ಸಲ್ಲಿಸಿದ ಸತೀಶ್ ಜಾರಕಿಹೊಳಿ
• 1.10 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಭೂಮಿಪೂಜೆ
• ಮಣ್ಣಿನ ಮಕ್ಕಳ ಕುಸ್ತಿ ಪಂದ್ಯಾವಳಿಗೆ ಸಚಿವರಿಂದ ಚಾಲನೆ

ಬೆಳಗಾವಿಯ ಕಡೋಲಿ ಗ್ರಾಮದಲ್ಲಿ ಇಂದು ಅಭಿವೃದ್ಧಿ ಹಬ್ಬ ಜರುಗಿತು. ಸಚಿವ ಸತೀಶ್ ಜಾರಕಿಹೊಳಿ ಅವರು ಹೆಲಿಕಾಪ್ಟರ್ ಮೂಲಕ ಗ್ರಾಮಕ್ಕೆ ಭೇಟಿ ನೀಡಿ, ದುಂಡೇಶ್ವರ ಮಠದಲ್ಲಿ ಪೂಜೆ ಸಲ್ಲಿಸಿದ್ದಲ್ಲದೆ, ಸುಮಾರು 1.10 ಕೋಟಿ ರೂ. ವೆಚ್ಚದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಗ್ರಾಮಸ್ಥರ ಸಂಭ್ರಮಕ್ಕೆ ಕಾರಣರಾದರು.

ಮಹಾಶಿವರಾತ್ರಿ ಹಬ್ಬದ ವಿಶೇಷ ಸಂದರ್ಭದಲ್ಲಿ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿ ಅವರು ಕಡೋಲಿ ಗ್ರಾಮಕ್ಕೆ ಭರ್ಜರಿ ಕೊಡುಗೆ ನೀಡಿದ್ದಾರೆ. ಇಂದು ಮುಂಜಾನೆ ಗ್ರಾಮಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಸಚಿವರು, ಐತಿಹಾಸಿಕ ಶ್ರೀ ದುಂಡೇಶ್ವರ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಾಡಿನ ಸುಖ-ಶಾಂತಿಗಾಗಿ ಪ್ರಾರ್ಥಿಸಿದ ಅವರು, ಮಠದ ಆವರಣದಲ್ಲಿ ಭಕ್ತಾದಿಗಳೊಂದಿಗೆ ಕೆಲ ಕಾಲ ಸಂವಾದ ನಡೆಸಿದರು.

ಬಳಿಕ ಕಡೋಲಿ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾಗಿದ್ದ 1 ಕೋಟಿ 10 ಲಕ್ಷ ರೂಪಾಯಿ ಮೊತ್ತದ ಸಿಸಿ ರಸ್ತೆ ಮತ್ತು ಡಾಂಬರೀಕರಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು. ಅಭಿವೃದ್ಧಿ ಕಾಮಗಾರಿಗಳ ಜೊತೆಗೆ ಕ್ರೀಡೆಗೂ ಪ್ರೋತ್ಸಾಹ ನೀಡಿದ ಸಚಿವರು, ಸ್ವಾಮೀಜಿಗಳ ಸಾನಿಧ್ಯದಲ್ಲಿ ನಡೆದ ಭವ್ಯ ಕುಸ್ತಿ ಪಂದ್ಯಾವಳಿಗಳಿಗೆ ಚಾಲನೆ ನೀಡಿ ಕ್ರೀಡಾಪಟುಗಳನ್ನು ಹುರಿದುಂಬಿಸಿದರು.

ಕೆಪಿಸಿಸಿ ಸದಸ್ಯ ಮಲಗೌಡ ಪಾಟೀಲ್ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷ ಸಾಗರ್ ಪಾಟೀಲ್ ಸೇರಿದಂತೆ ಹಲವು ಗಣ್ಯರ ಉಪಸ್ಥಿತಿಯಲ್ಲಿ ನಡೆದ ಈ ಕಾರ್ಯಕ್ರಮವು ಕಡೋಲಿ ಗ್ರಾಮದ ಪಾಲಿಗೆ ಅವಿಸ್ಮರಣೀಯವಾಯಿತು. ಬೈಟ್

Tags:

error: Content is protected !!