ಬೆಳಗಾವಿ ಆಟೋ ನಗರದ ಕೈಗಾರಿಕೋದ್ಯಮಿಗಳು ತೀವ್ರ ಸಂಕಷ್ಟದಲ್ಲಿದ್ದಾರೆ. ಕಳೆದ ಒಂದು ವರ್ಷದಿಂದ ಇ-ಸ್ವತ್ತು ಮಾಡಿಕೊಡುವಂತೆ ಮನವಿ ಸಲ್ಲಿಸಿದರೂ, ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಇಂದು ಪಾಲಿಕೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಬೆಳಗಾವಿ ಆಟೋ ನಗರದ ಕೈಗಾರಿಕಾ ಪ್ರದೇಶದ ಇ-ಸ್ವತ್ತು ಮಾಡಲು ಮನವಿ ಸಲ್ಲಿಸಿ ಒಂದು ವರ್ಷ ಕಳೆದರೂ ಯಾವುದೇ ಅಧಿಕಾರಿಗಳು ಸೂಕ್ತವಾಗಿ ಸ್ಪಂದಿಸಿಲ್ಲ ಎಂದು ಆರೋಪಿಸಿ ಕೈಗಾರಿಕೋದ್ಯಮಿಗಳು ಮಹಾನಗರ ಪಾಲಿಕೆ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದರು.

ಇ-ಸ್ವತ್ತು ಇಲ್ಲದ ಕಾರಣ ಬ್ಯಾಂಕುಗಳಿಂದ ಸಾಲ ಸಿಗದೆ ವ್ಯವಹಾರ ವಿಸ್ತರಣೆಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಉದ್ಯಮಿಗಳು ತಮ್ಮ ಅಳಲು ತೋಡಿಕೊಂಡರು. ಹಿಂಬರಹ ನೀಡಲು ಮೂರು ತಿಂಗಳು ಸಮಯ ತೆಗೆದುಕೊಳ್ಳುವ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಅಧಿಕಾರಿಗಳು ಶ್ರೀಮಂತರಿಗೆ ಮಾತ್ರ ಇ-ಸ್ವತ್ತು ಮಾಡಿಕೊಡುತ್ತಿದ್ದು, ಬಡ ಕೈಗಾರಿಕೋದ್ಯಮಿಗಳನ್ನು ನಿರ್ಲಕ್ಷಿಸುತ್ತಿದ್ದಾರೆ ಎಂಬ ಗಂಭೀರ ಆರೋಪ ಪ್ರತಿಭಟನಾಕಾರರಿಂದ ಕೇಳಿಬಂತು. “ನಮ್ಮ ಆಸ್ತಿಯ ಇ-ಸ್ವತ್ತನ್ನು ನಾವೇ ಕೇಳುತ್ತಿದ್ದೇವೆ, ಅದನ್ನು ಕೊಡಲು ತಡವೇಕೆ?” ಎಂದು ಅವರು ಪ್ರಶ್ನಿಸಿದರು.ಬೈಟ್
ಕೂಡಲೇ ಅಧಿಕಾರಿಗಳು ಎಚ್ಚೆತ್ತುಕೊಂಡು ಇ-ಸ್ವತ್ತು ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು, ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಉದ್ಯಮಿಗಳು ಎಚ್ಚರಿಕೆ ನೀಡಿದ್ದಾರೆ.
