bagalkot

ಬಾಗಲಕೋಟೆ: ತರಕಾರಿ ಚೀಲದಲ್ಲಿದ್ದ ಮಾಂಗಲ್ಯ ಸರ ಕದ್ದ ಕಳ್ಳ 24 ಗಂಟೆಯಲ್ಲಿ ಪೊಲೀಸರ ಅತಿಥಿ!

Share

ಬಾಗಲಕೋಟೆ ಜಿಲ್ಲೆಯ ಬನಹಟ್ಟಿಯಲ್ಲಿ ಮಹಿಳೆಯೊಬ್ಬರ ತರಕಾರಿ ಚೀಲದಿಂದ ಮಾಂಗಲ್ಯ ಸರ ಕದ್ದು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಕೇವಲ 24 ಗಂಟೆಗಳಲ್ಲಿ ಬಂಧಿಸಿದ್ದಾರೆ. ಬನಹಟ್ಟಿ ಪೊಲೀಸರ ಈ ಚುರುಕು ಕಾರ್ಯಾಚರಣೆಯ ವಿಶೇಷ ವರದಿ ಇಲ್ಲಿದೆ.

ಬನಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮಾಂಗಲ್ಯ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಯಂಕವ್ವ ಮಾಂತೇಶ್ ಹೂಗಾರ ಎಂಬ ಮಹಿಳೆ ತಮ್ಮ ಹೊಲದ ಚೀಲದಲ್ಲಿ ಮಾಂಗಲ್ಯ ಸರ ಇಟ್ಟು ಸಂತೆಗೆ ಹೋಗಿದ್ದರು. ತರಕಾರಿ ತೆಗೆದುಕೊಂಡು ಬಂದು ನೋಡುವಷ್ಟರಲ್ಲಿ ಚೀಲದಲ್ಲಿದ್ದ ಮಾಂಗಲ್ಯ ಸರ ಕಳ್ಳತನವಾಗಿತ್ತು. ಈ ಸಂಬಂಧ ತನಿಖೆ ಕೈಗೊಂಡ ಬನಹಟ್ಟಿ ಪೊಲೀಸರು, ಪ್ರಕರಣ ದಾಖಲಾದ ಕೇವಲ 24 ಗಂಟೆಗಳಲ್ಲಿ ಆರೋಪಿ ಅಬೂಬ್ಕರ್ ರಂಜಾನ್ ಸಾಬ್ ಮುಲ್ಲಾನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಯಿಂದ ಸುಮಾರು 3 ಲಕ್ಷ ರೂ. ಮೌಲ್ಯದ 10 ಗ್ರಾಂ ಮಾಂಗಲ್ಯ ಸರ, 5 ಗ್ರಾಂ ಸರ ಮತ್ತು ಕಳ್ಳತನಕ್ಕೆ ಬಳಸಿದ್ದ ಬೈಕ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸದ್ಯ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.

 

 

Tags:

error: Content is protected !!