Khanapur

ಖಾನಾಪುರ ಸರ್ಕಾರಿ ಶಾಲೆಯಲ್ಲಿ ಮಕ್ಕಳ ವಿಜ್ಞಾನ ಲೋಕ ಅನಾವರಣ: ಪುಟ್ಟ ವಿಜ್ಞಾನಿಗಳ ಪ್ರತಿಭೆಗೆ ಸಾದೀಕ್ ನಂದಗಡಿ ಮೆಚ್ಚುಗೆ!

Share

ಬೆಳಗಾವಿ ಜಿಲ್ಲೆಯ ಖಾನಾಪುರ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಗಂಡು ಮಕ್ಕಳ ಶಾಲೆಯಲ್ಲಿ ಇಂದು ವಿಜ್ಞಾನದ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಶಾಲಾ ವಿದ್ಯಾರ್ಥಿಗಳು ಸಿದ್ಧಪಡಿಸಿದ ವೈವಿಧ್ಯಮಯ ವಿಜ್ಞಾನ ಮಾದರಿಗಳು ನೋಡುಗರ ಗಮನ ಸೆಳೆದವು. ಪ್ರಸಿದ್ಧ ನ್ಯಾಯವಾದಿ ಸಾದೀಕ್ ನಂದಗಡಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಕ್ಕಳನ್ನು ಹುರಿದುಂಬಿಸಿದರು.


ಖಾನಾಪುರ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಗಂಡು ಮಕ್ಕಳ ಶಾಲೆಯಲ್ಲಿ ವಿದ್ಯಾರ್ಥಿಗಳ ಜ್ಞಾನಾರ್ಜನೆಗಾಗಿ ಆಯೋಜಿಸಲಾಗಿದ್ದ ವಿಜ್ಞಾನ ಪ್ರದರ್ಶನವು ಯಶಸ್ವಿಯಾಗಿ ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಪ್ರಸಿದ್ಧ ನ್ಯಾಯವಾದಿ ಸಾದೀಕ್ ನಂದಗಡಿ ಅವರು, “ಇದು ವಿದ್ಯಾರ್ಥಿಗಳಿಗೆ ವಿಜ್ಞಾನದ ಜ್ಞಾನವನ್ನು ಪಸರಿಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕಾರ್ಯಕ್ರಮಗಳ ಮೂಲಕ ಮಕ್ಕಳಲ್ಲಿರುವ ಸುಪ್ತ ಪ್ರತಿಭೆ ಮತ್ತು ವೈಜ್ಞಾನಿಕ ಮನೋಭಾವವನ್ನು ಹೊರತರಲು ಶಿಕ್ಷಕರು ಹಾಗೂ ಪಾಲಕರು ಹೆಚ್ಚಿನ ಪ್ರೋತ್ಸಾಹ ನೀಡಬೇಕು” ಎಂದು ಕರೆ ನೀಡಿದರು.
ಪ್ರದರ್ಶನದಲ್ಲಿ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆ, ನವೀಕರಿಸಬಹುದಾದ ಇಂಧನ ಹಾಗೂ ದೈನಂದಿನ ಜೀವನದಲ್ಲಿ ವಿಜ್ಞಾನದ ಬಳಕೆಗೆ ಸಂಬಂಧಿಸಿದ ಹತ್ತಾರು ಆಕರ್ಷಕ ಮಾದರಿಗಳನ್ನು ಪ್ರದರ್ಶಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದರು. ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಆಬಿದಹುಸೇನ್ ಮುಜಾವರ, ಉದ್ಯಮಿ ಪ್ರಮೋದ್ ಕೊಚೋರಿ, ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಲಕ್ಷ್ಮಣ್ ಮಾದಾರ ಹಾಗೂ ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಸದಸ್ಯ ಇಸಾಕ್ ಖಾನ್ ಪಠಾಣ್ ಸೇರಿದಂತೆ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Tags:

error: Content is protected !!