BELAGAVI

ಸಿಎಂ ಬದಲಾವಣೆ ಚರ್ಚೆ ಅಕ್ಷಮ್ಯ ಅಪರಾಧ: ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದ ಲಕ್ಷ್ಮೀ ಹೆಬ್ಬಾಳ್ಕರ್

Share

ಬೆಳಗಾವಿಯಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ರಾಜ್ಯ ರಾಜಕಾರಣದ ಬಿರುಸಿನ ಚರ್ಚೆಗಳಿಗೆ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ವಿಚಾರ ಹೈಕಮಾಂಡ್ ಮೆಟ್ಟಿಲೇರಿರುವ ಬೆನ್ನಲ್ಲೇ, ರಾಜ್ಯ ಮಟ್ಟದಲ್ಲಿ ಈ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದು ಸಹೋದ್ಯೋಗಿಗಳಿಗೆ ಕಿವಿಮಾತು ಹೇಳಿದ್ದಾರೆ. ಇದರೊಂದಿಗೆ ಬೆಳಗಾವಿ ಗ್ರಾಮೀಣ ಭಾಗದ ಅಭಿವೃದ್ಧಿ ಕುರಿತು ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ.

ರಾಜ್ಯದಲ್ಲಿ ಕೇಳಿಬರುತ್ತಿರುವ ಸಿಎಂ ಬದಲಾವಣೆ ಚರ್ಚೆಯ ಕುರಿತು ಪ್ರತಿಕ್ರಿಯಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, “ಸಿಎಂ ಬದಲಾವಣೆಗೆ ಸಂಬಂಧಿಸಿದ ಚರ್ಚೆಗಳು ಏನಿದ್ದರೂ ಅದು ದೆಹಲಿ ಮಟ್ಟದಲ್ಲಿ ನಡೆಯಬೇಕು. ಅದನ್ನು ಬಿಟ್ಟು ರಾಜ್ಯದಲ್ಲಿ ಈ ಬಗ್ಗೆ ಮಾತನಾಡುವುದು ಅಕ್ಷಮ್ಯ ಅಪರಾಧ” ಎಂದು ಮಾರ್ಮಿಕವಾಗಿ ಹೇಳಿದರು. ಹೈಕಮಾಂಡ್ ಆದೇಶ ಪಾಲಿಸುವುದು ನಮ್ಮೆಲ್ಲರ ಕರ್ತವ್ಯ ಎಂದ ಅವರು, ಶಾಸಕರ ವಿದೇಶ ಪ್ರವಾಸದ ಬಗ್ಗೆ ತಮಗೆ ಯಾವುದೇ ಮಾಹಿತಿಯಿಲ್ಲ ಎಂದು ಸ್ಪಷ್ಟಪಡಿಸಿದರು. ಡಿ.ಕೆ. ಶಿವಕುಮಾರ್ ಹಾಗೂ ಚನ್ನರಾಜ ಹಟ್ಟಿಹೊಳಿ ಅವರ ಹೇಳಿಕೆಗಳು ಅವರ ವೈಯಕ್ತಿಕ ವಿಚಾರಕ್ಕೆ ಬಿಟ್ಟಿದ್ದು ಎಂದು ಪ್ರತಿಕ್ರಿಯಿಸಿದರು.

ಬೆಳಗಾವಿ ತಾಲೂಕಿನ ಅಭಿವೃದ್ಧಿಯ ದೃಷ್ಟಿಯಿಂದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಇನ್ಮುಂದೆ ಇದನ್ನು ‘ಬೆಳಗಾವಿ ಗ್ರಾಮೀಣ ತಾಲೂಕು’ ಎಂದು ಮರುನಾಮಕರಣ ಮಾಡಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಹಿರೇಬಾಗೇವಾಡಿಯನ್ನು ಈಗಾಗಲೇ ಪಟ್ಟಣ ಪಂಚಾಯಿತಿ ದರ್ಜೆಗೇರಿಸಲಾಗಿದ್ದು, ಶೀಘ್ರದಲ್ಲೇ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಿಸುವ ಯೋಜನೆ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು. ಇದೇ ವೇಳೆ ವೈಭವ ನಗರದ ಶ್ರೀರಾಮ ಕಾಲನಿಯಲ್ಲಿನ ನೀರಿನ ಸಮಸ್ಯೆ ಬಗ್ಗೆ ಗಮನ ಸೆಳೆದಾಗ, ಪ್ರತಿಭಟನಾಕಾರರ ಬೇಡಿಕೆಗೆ ಸ್ಪಂದಿಸಿ ಕೂಡಲೇ ಸಮಸ್ಯೆ ಪರಿಹರಿಸುವ ಭರವಸೆ ನೀಡಿದರು.

Tags:

error: Content is protected !!