Nandagad

ನಂದಗಡದಲ್ಲಿ ಖಾಕಿ ಭೇಟೆ: ಅಕ್ರಮ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ವಶ

Share

ಖಾನಾಪೂರ ತಾಲೂಕಿನ ನಂದಗಡ ವ್ಯಾಪ್ತಿಯಲ್ಲಿ ಅಕ್ರಮ ಮರಳು ದಂಧೆಗೆ ಪೊಲೀಸರು ಬ್ರೇಕ್ ಹಾಕಿದ್ದಾರೆ. ಬಿಗಿ ಪೊಲೀಸ್ ಕಾವಲಿನ ನಡುವೆಯೂ ಪ್ರಭಾವಿಗಳ ಬೆಂಬಲದೊಂದಿಗೆ ಹಗಲು ಹೊತ್ತಿನಲ್ಲೇ ನಡೆಯುತ್ತಿದ್ದ ಮರಳು ಲೂಟಿಯನ್ನು ತಡೆಯುವಲ್ಲಿ ನಂದಗಡ ಪೊಲೀಸರು ಯಶಸ್ವಿಯಾಗಿದ್ದಾರೆ. ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಅನ್ನು ವಶಕ್ಕೆ ಪಡೆದಿರುವ ಪೊಲೀಸರು, ದಂಧೆಕೋರರಿಗೆ ಬಿಸಿ ಮುಟ್ಟಿಸಿದ್ದಾರೆ.

ಖಾನಾಪೂರ ತಾಲೂಕಿನ ನಂದಗಡ ಮತ್ತು ಸುತ್ತಮುತ್ತಲಿನ ಹಳ್ಳಿಗಳಲ್ಲಿ ಕಳೆದ ಕೆಲವು ದಿನಗಳಿಂದ ಅಕ್ರಮ ಮರಳು ದಂಧೆ ಎಗ್ಗಿಲ್ಲದೆ ಸಾಗಿತ್ತು. ತಾಲೂಕಿನಲ್ಲಿ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲಾಗಿದೆ ಎಂದು ಹೇಳಲಾಗುತ್ತಿದ್ದರೂ, ದಂಧೆಕೋರರು ಮಾತ್ರ ಯಾವುದೇ ಭಯವಿಲ್ಲದೆ ಹಗಲು ಹೊತ್ತಿನಲ್ಲೇ ಟ್ರ್ಯಾಕ್ಟರ್‌ಗಳ ಮೂಲಕ ಮರಳು ಸಾಗಾಟ ಮಾಡುತ್ತಿದ್ದರು. ಪ್ರಭಾವಿಗಳ ಒತ್ತಡಕ್ಕೆ ಮಣಿದು ದಂಧೆ ನಡೆಯುತ್ತಿದೆ ಎನ್ನುವ ಮಾತುಗಳು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದವು.

ಸಾರ್ವಜನಿಕರ ದೂರು ಹಾಗೂ ಖಚಿತ ಮಾಹಿತಿಯ ಮೇರೆಗೆ ಕಾರ್ಯಪ್ರವೃತ್ತರಾದ ನಂದಗಡ ಪೊಲೀಸರು ದಾಳಿ ನಡೆಸಿ, ಅಕ್ರಮ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಅನ್ನು ವಶಕ್ಕೆ ಪಡೆದಿದ್ದಾರೆ. ಈ ಕಾರ್ಯಾಚರಣೆಯ ಮೂಲಕ ಅಕ್ರಮ ದಂಧೆಕೋರರಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಸದ್ಯ ಟ್ರ್ಯಾಕ್ಟರ್ ವಶಕ್ಕೆ ಪಡೆದಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Tags:

error: Content is protected !!