ಧಾರವಾಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಆರ್. ಸ್ನೇಹಲ್ ಅವರು ಬೆಳ್ಳಂ ಬೆಳಗ್ಗೆ ಸಿಟಿ ರೌಂಡ್ ಮಾಡಿದರು. ಅಷ್ಟೇ ಅಲ್ಲದೆ ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಪ್ರೈಓವರ್ ನಿರ್ಮಾಣದ ಕಾಮಗಾರಿಯನ್ನು ಶಾಸಕ ಮಹೇಶ್ ಟೆಂಗಿನಕಾಯಿ ಅವರ ಜೊತೆಯಲ್ಲಿ ಜಿಲ್ಲಾಧಿಕಾರಿ ಮೇಡಂ ವೀಕ್ಷಣೆ ಮಾಡಿದರು.

ನಗರದ ಹೊಸೂರು, ಬಸವ ವನ, ಭವಾನಿ ಆರ್ಕಿಡ್, ಚನ್ನಮ್ಮ ಸರ್ಕಲ್ ಬಳಿ ಫೈ ಓವರ್ ಕಾಮಗಾರಿ ನಡೆಯುತ್ತಿದ್ದು, ಮಂದಗತಿಯಲ್ಲಿ ನಡೆದ ಕಾಮಗಾರಿಗೆ ಸಾರ್ವಜನಿಕರಿಂದ ಅಸಮಾಧಾನ ವ್ಯಕ್ತವಾಗುತ್ತಿದ್ದಂತೆ ನೂತನ ಜಿಲ್ಲಾಧಿಕಾರಿ ಆರ್. ಸ್ನೇಹಲ್ ಅವರು ಶಾಸಕರ ಜೊತೆ ವೀಕ್ಷಣೆ ಮಾಡಿ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಲು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದರು.
