Vijaypura

ಹಲಸಂಗಿ ಸುಲಿಗೆ ಪ್ರಕರಣ ಭೇದಿಸಿದ ಪೊಲೀಸರು – ಇಬ್ಬರು ಆರೋಪಿಗಳು ಬಂಧನ

Share

ಜಿಲ್ಲೆಯ ಝಳಕಿ ಪೊಲೀಸ್ ಠಾಣಾ ವ್ಯಾಪ್ತಿಯ ಹಲಸಂಗಿ ಗ್ರಾಮದಲ್ಲಿ ನಡೆದಿದ್ದ ಸುಲಿಗೆ ಪ್ರಕರಣವನ್ನು ಭೇದಿಸಿದ ಪೋಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪೋಲಿಸ್ ವರಿಷ್ಟಾಧಿಕಾರಿಯಾದ ಲಕ್ಷ್ಮಣ ನಿಂಬರಗಿ ಮಾತನಾಡಿ ಮಾಹಿತಿ ನೀಡಿದರು.ಜ.26 ರಂದು ಮಧ್ಯಾಹ್ನ ಸುಮಾರು 3.30 ಗಂಟೆಯ ಸುಮಾರಿಗೆ ಹಲಸಂಗಿ ಗ್ರಾಮದ ಮಹಾರುದ್ರ ಸದಾಶಿವ ಕಂಚಗಾರ ಅವರ ‘ಭೂಮಿಕಾ ಜ್ಯುವೆಲ್ಲರಿ’ ಅಂಗಡಿಗೆ ಮುಖಕ್ಕೆ ಕಪ್ಪು ಬಟ್ಟೆ ಹಾಗೂ ಹೆಲ್ಮೆಟ್ ಧರಿಸಿ ಬಂದ ಇಬ್ಬರು ಆರೋಪಿಗಳು ಕಪ್ಪು ಬಣ್ಣದ ಯುನಿಕಾರ್ನ್ ಮೋಟಾರ್ ಸೈಕಲ್ ಮೇಲೆ ಆಗಮಿಸಿದ್ದರು. ತಮ್ಮ ಬಳಿ ಇದ್ದ ಪಿಸ್ತೂಲ್ ತೋರಿಸಿ ಅಂಗಡಿಯಲ್ಲಿದ್ದ 205 ಗ್ರಾಂ ಬಂಗಾರದ ಆಭರಣಗಳು ಹಾಗೂ 1 ಕೆಜಿ ಬೆಳ್ಳಿಯ ಆಭರಣಗಳನ್ನು ಸುಲಿಗೆ ಮಾಡಿಕೊಂಡು ಪರಾರಿಯಾಗಿದ್ದರು. ಸುಲಿಗೆಗೊಂಡ ಆಭರಣಗಳ ಒಟ್ಟು ಮೌಲ್ಯ ಅಂದಾಜು ₹22 ಲಕ್ಷ ಎಂದು ತಿಳಿದುಬಂದಿದೆ.
ಪರಾರಿಯಾಗುವ ವೇಳೆ ಅಂಗಡಿ ಪಕ್ಕದಲ್ಲಿದ್ದ ಸಾರ್ವಜನಿಕರ ಕಡೆಗೆ ಪಿಸ್ತೂಲ್‌ನಿಂದ ಗುಂಡು ಹಾರಿಸಿ ಗಾಯಗೊಳಿಸಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿತ್ತು. ಈ ಕುರಿತು ಅಂಗಡಿ ಮಾಲೀಕರ ದೂರು ಆಧರಿಸಿ ಝಳಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ಗಂಭೀರತೆಯನ್ನು ಮನಗಂಡು ಜಿಲ್ಲಾ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ವಿಶೇಷ ತಂಡಗಳನ್ನು ರಚಿಸಿ ತನಿಖೆ ಕೈಗೊಂಡು ತಾಂತ್ರಿಕ ಮಾಹಿತಿ ಹಾಗೂ ಸ್ಥಳೀಯ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು
ಬಂಧಿತ ಆರೋಪಿಗಳನ್ನು
ಹಣಮಂತ ಮಲ್ಲಪ್ಪ ವಾಘೋಲಿ (28),
ಶಿವರಾಜ್ @ ಗೌಡಪ್ಪ ರಾವುಸಾಹೇಬ ನಾವಿ (28)
ಎಂದು ಗುರುತಿಸಲಾಗಿದೆ. ಇಬ್ಬರೂ ಮಹಾರಾಷ್ಟ್ರ ಮೂಲದವರಾಗಿದ್ದು, ಪ್ರಸ್ತುತ ಪೂನಾ ಭಾಗದಲ್ಲಿ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ.
ಆರೋಪಿಗಳಿಂದ 205 ಗ್ರಾಂ ಬಂಗಾರದ ಆಭರಣಗಳು, 1 ಕೆಜಿ ಬೆಳ್ಳಿಯ ಆಭರಣಗಳು (ಒಟ್ಟು ಮೌಲ್ಯ ₹22 ಲಕ್ಷ), 3 ಕಂಟ್ರಿ ಪಿಸ್ತೂಲ್, 26 ಜೀವಂತ ಗುಂಡುಗಳು, ಒಂದು ಏರ್ ಗನ್, ಕೃತ್ಯಕ್ಕೆ ಬಳಸಿದ ಹೊಂಡಾ ಯುನಿಕಾರ್ನ್ ಮೋಟಾರ್ ಸೈಕಲ್, ಮಾಸ್ಕ್, ಜಾಕೆಟ್ ಸೇರಿದಂತೆ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು ಅದಲ್ಲದೇ
ಘಟನೆ ನಡೆದ ಕೇವಲ 20 ದಿನಗಳಲ್ಲೇ ಪ್ರಕರಣವನ್ನು ಭೇದಿಸಿದ ತನಿಖಾ ತಂಡದ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಕಾರ್ಯಕ್ಷಮತೆಯನ್ನು ಮೆಚ್ಚಿ ಅವರಿಗೆ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಗಿದೆ ಎಂದು ತಿಳಿಸಿದರು.

Tags:

error: Content is protected !!