ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಹಿಂದವಿ ಸ್ವರಾಜ್ಯದ ಸಂಸ್ಥಾಪಕರಾದ ಛತ್ರಪತಿ ಶಿವಾಜೀ ಮಹಾರಾಜರ 394ನೇ ಜಯಂತಿಯನ್ನು ಆಚರಿಸಲಾಯಿತು.

ಇಂದು ಬೆಳಗಾವಿಯ ಡಾ. ಶ್ಯಾಮಾ ಪ್ರಸಾದ ಮುಖರ್ಜಿ ರಸ್ತೆಯಲ್ಲಿರುವ ಉದ್ಯಾನದಲ್ಲಿ ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಹಿಂದವಿ ಸ್ವರಾಜ್ಯದ ಸಂಸ್ಥಾಪಕರಾದ ಛತ್ರಪತಿ ಶಿವಾಜೀ ಮಹಾರಾಜರ 394ನೇ ಜಯಂತಿಯನ್ನು ಆಚರಿಸಲಾಯಿತು. ಜಿಲ್ಲಾಧಿಕಾರಿಗಳಾದ ಮೊಹ್ಮದ್ ರೋಷನ್, ನಗರ ಪೊಲೀಸ್ ಆಯುಕ್ತರಾದ ಭೂಷಣ್ ಬೋರಸೆ, ಮಹಾನಗರ ಪಾಲಿಕೆ ಆಯುಕ್ತರಾದ ಎಂ.ಕಾರ್ತಿಕ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ ಇನ್ನುಳಿದ ಗಣ್ಯರು ಛತ್ರಪತಿ ಶಿವಾಜೀ ಮಹಾರಾಜರ ಸಿಂಹಾಸನಾರೂಢ ಮೂರ್ತಿಗೆ ಪೂಜೆಯನ್ನು ನೆರವೇರಿಸಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಮೊಹ್ಮದ್ ರೋಷನ್ ಮತ್ತು ನಗರ ಪೊಲೀಸ್ ಆಯುಕ್ತರಾದ ಭೂಷಣ್ ಬೋರಸೆ ಅವರು ಬೆಳಗಾವಿಯ ಛತ್ರಪತಿ ಶಿವಾಜೀ ಮಹಾರಾಜರ ಜಯಂತಿ ಆಚರಣೆ ಇಡೀ ದೇಶಕ್ಕೆ ಮಾದರಿಯ ಸಂದೇಶವನ್ನು ನೀಡುತ್ತದೆ. ಬೆಳಗಾವಿ ನಗರ ಮತ್ತು ಜಿಲ್ಲೆಯಲ್ಲಿ ಸದಾ ಶಾಂತಿ ಮತ್ತು ಸೌಹಾರ್ದತೆ ನೆಲೆಸಿರಲಿ ಎಲ್ಲರಿಗೂ ಶಿವಜಯಂತಿಯ ಶುಭಾಷಗಳನ್ನು ತಿಳಿಸಿದರು.
ಈ ಸಂದರ್ಭದಲ್ಲಿ ದಲಿತ ಧುರೀಣ ಮಲ್ಲೇಶ್ ಚೌಗುಲೆ, ಆಕಾಶ ಹಲಗೇಕರ ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು ಶಿವಶಂಭು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ಧರು.
