hubbali

ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಲು NWKSRTC ಎಂ ಡಿ ಪ್ರಿಯಾಂಗ್ ಎಚ್ಚರಿಕೆ

Share

ರಾಜ್ಯದ ನಾಲ್ಕು ನಿಗಮ ಸೇರಿದಂತೆ
ಕೆಎಸ್‌ಆರ್‌ಟಿಸಿ ನೌಕರರ ‘ಬೆಂಗಳೂರು ಚಲೋ’ ಪ್ರತಿಭಟನೆಯಿಂದ ಹಮ್ಮಿಕೊಳ್ಳಲಾಗಿದ್ದು ಯಾವುದೇ ರೀತಿಯ ತೊಂದರೆ ಆಗದಂತೆ ವಾಯುವ್ಯ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನ ವಹಿಸಿದೆ ಎಂದು ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮ್ಯಾನೇಜರ್ ಡೈರೆಕ್ಟರ್ ಪ್ರಿಯಾಂಗ್ ಹೇಳಿದರು.

ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು,
ವೇತನ ಪರಿಷ್ಕರಣೆ, ಹಿಂಬಾಕಿ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ನೌಕರರು ಆಗ್ರಹಿಸುತ್ತಿದ್ದಾರೆ. ಏತನ್ಮಧ್ಯೆ, ಕರ್ತವ್ಯಕ್ಕೆ ಗೈರಾದರೆ ಶಿಸ್ತು ಕ್ರಮ ಹಾಗೂ ವೇತನ ಕಡಿತಗೊಳಿಸುವುದಾಗಿ NWKSRTC ಎಂಡಿ ಪ್ರಿಯಾಂಗ್
ಎಚ್ಚರಿಕೆ ನೀಡಿದ್ದಾರೆ. ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗುವಂತೆ ನೌಕರರಿಗೆ ಸೂಚನೆ ನೀಡಿದ್ದಾರೆ. ಪ್ರತಿಭಟನೆಯಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಿರುವ ಅವರು, ಕರ್ತವ್ಯಕ್ಕೆ ಗೈರಾದಲ್ಲಿ ವೇತನ ಕಡಿತ ಸೇರಿದಂತೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ಗುರುವಾರ ಬಸ್ ಸಂಚಾರದಲ್ಲಿ ವ್ಯತ್ಯಯ ಆಗದಂತೆ ಕ್ರಮಕೈಗೊಳ್ಳಬೇಕೆಂದು ಸಾರಿಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆಮ ತುರ್ತು, ಅನಿವಾರ್ಯ, ಮೆಡಿಕಲ್ ರಜೆ ಅಗತ್ಯ ಸಂದರ್ಭ ಹೊರತುಪಡಿಸಿ ನೌಕರರಿಗೆ ಯಾವುದೇ ರಜೆ ನೀಡಬೇಡಿ. ಇದು ವಾರದ ರಜೆ ಅಥವಾ ದೀರ್ಘಾವಧಿ ರಜೆಯಲ್ಲಿರುವವರಿಗೆ ಅನ್ವಯಿಸುವುದಿಲ್ಲ. ಅಗತ್ಯವಿದ್ದರೆ ವಾರದ ರಜೆಯನ್ನು ರದ್ದುಪಡಿಸಿ ಕೆಲಸಕ್ಕೆ ಹಾಜರಾಗಲು ತಿಳಿಸಿದರು.

Tags:

error: Content is protected !!