ರಾಜ್ಯ ಕಾರ್ಯಕಾರಿಣಿ ಇದೊಂದು ಸಂಘಟನಾತ್ಮಕ ಸಭೆಯಲ್ಲ ಆತ್ಮಮಂಥನದ ಸಭೆ ಇದಾಗಿದೆ’ ಎಂದು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ತಿಳಿಸಿದ್ದಾರೆ.


ಬೆಂಗಳೂರು ನಗರದ ಅರಮನೆ ಮೈದಾನದ ಗಾಯತ್ರಿ ಗ್ರಾಂಡ್ ನಲ್ಲಿ ಇಂದು ನಡೆದ ರಾಜ್ಯ ಕಾರ್ಯಕಾರಿಣಿಯ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ನರೇಂದ್ರ ಮೋದಿಜೀ ಅವರ ವಿಕಸಿತ ಭಾರತದ ವಿಚಾರಧಾರೆಯ ಮನನ ಮಾಡುವ ಸಭೆ ಇದು. ಸಂಘಟನೆ, ಭ್ರಷ್ಟ ಸರಕಾರವನ್ನು ಅಧಿಕಾರದಿಂದ ತೊಲಗಿಸಿ ಅಧಿಕಾರ ಮರಳಿ ಪಡೆಯುವ ಸಂಕಲ್ಪದ ಸಭೆ ಎಂದು ವಿಶ್ಲೇಷಿಸಿದರು.
ಪಕ್ಷ ಮುನ್ನಡೆಸುವ ವಿಚಾರದಲ್ಲಿ ಕರ್ನಾಟಕದಲ್ಲಿ ಯಡಿಯೂರಪ್ಪ ಅವರು ದೊಡ್ಡ ಕೊಡುಗೆ ನೀಡಿದ್ದಾರೆ. 2028ರಲ್ಲಿ ಕರ್ನಾಟಕದಲ್ಲಿ ಪ್ರಚಂಡ ಬಹುಮತದೊಂದಿಗೆ ಬಿಜೆಪಿ ಅಧಿಕಾರ ಪಡೆಯಲಿದೆ. ಪಕ್ಷದ ಆರಂಭಿಕ ದಿನಗಳಲ್ಲಿ ಶ್ರಮಿಸಿದ ಕಾರ್ಯಕರ್ತರಿಗೆ ನಮನಗಳು. ಅವರ ಭದ್ರ ಅಡಿಪಾಯದಲ್ಲಿ ಬಿಜೆಪಿ ಇಷ್ಟೊಂದು ಬೆಳೆದುನಿಂತಿದೆ ಎಂದು ತಿಳಿಸಿದರು. ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಪದವಿಗಾಗಿ ಆರಂಭದಲ್ಲೇ ಒಳಜಗಳ ಇತ್ತು. ಅದು ಈಗಲೂ ಮುಂದುವರೆದಿದೆ. ಇದು ಜನಾದೇಶಕ್ಕೆ ಮಾಡುತ್ತಿರುವ ಅಪಮಾನ. ಜನರು ಗ್ಯಾರಂಟಿ ಎಲ್ಲಿದೆ ಎಂದು ಪ್ರಶ್ನೆ ಮಾಡುತ್ತಿದ್ದಾರೆ. ಸಾಲದ ಪ್ರಮಾಣ ತೀವ್ರವಾಗಿ ಹೆಚ್ಚಾಗಿದೆ ಎಂದು ತಿಳಿಸಿದರು.
ಡಿಸಿಎಂ ಡಿ.ಕೆ.ಶಿವಕುಮಾ
ಮುಂಬರುವ ಸ್ಥಳೀಯ ಸಂಸ್ಥೆಗಳ ಹಾಗೂ ಜಿಬಿಎ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸುವ ಸಂಕಲ್ಪ ನಮ್ಮದಾಗಬೇಕು. ಬಿಜೆಪಿಯನ್ನು ತಳಮಟ್ಟದಲ್ಲಿ ಬಲಪಡಿಸಲು ಅವರು ಸೂಚಿಸಿದರು. ಇದು ಪರೀಕ್ಷೆಯ ಕಾಲ; ಕಾರ್ಯಕರ್ತರು ಜನರ ಮನೆ ಮನೆಗೆ ತೆರಳಿ ಕಾಂಗ್ರೆಸ್ಸಿನ ವೈಫಲ್ಯಗಳನ್ನು ತಿಳಿಸಬೇಕು ಎಂದು ತಿಳಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ನಿತೀನ್ ನಭಿ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನವನ್ನು ನೀಡಿದ್ದು, ದೇಶದ ಯುವಶಕ್ತಿಗೆ ಉತ್ಸಾಹ ತುಂಬಿದಂತಾಗಿದೆ. ಪಿಎಂ ಮೋದಿ ಅವರ 2047ರ ವಿಕಸಿತ ಭಾರತದ ಸಂಕಲ್ಪಕ್ಕೆ ಪೂರಕವಾದ ಬಜೆಟ್ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಮಣ್ ಅವರು ಮಂಡಿಸಿದ್ದಾರೆ. ದೇಶದ ಯುವ ಮತ್ತು ಮಹಿಳಾ ಶಕ್ತಿಗೆ ಭದ್ರ ಬುನಾದಿಯನ್ನು ತುಂಬಲು ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಮಾಡ ಹೊರಟಿದ್ದಾರೆ. ಯುಪಿಎ ಸರ್ಕಾರವಿದ್ದಾಗ ಭಾರತವನ್ನು ಯಾರೂ ಗುರುತಿಸುತ್ತಿರಲಿಲ್ಲ. ಈಗ ಪಿಎಂ ಮೋದಿ ನೇತೃತ್ವದಲ್ಲಿ ಜಗತ್ತಿನ ನಾಲ್ಕನೇ ಒಂದು ಆರ್ಥಿಕ ಶಕ್ತಿಯಾಗಿ ಹೊರ ಹೊಮ್ಮಿದೆ ಎಂದರು.
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಸಚಿವರಾದ, ಪ್ರಹ್ಲಾದ್ ಜೋಶಿ, ಕು.ಶೋಭಾ ಕರಂದ್ಲಾಜೆ, ವಿ.ಸೋಮಣ್ಣ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗ್ರವಾಲ್, ರಾಜ್ಯ ಸಹ ಉಸ್ತುವಾರಿ ಪಿ.ಸುಧಾಕರ್ ರೆಡ್ಡಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಡಿ.ವಿ.ಸದಾನಂದ ಗೌಡ, ಜಗದೀಶ್ ಶೆಟ್ಟರ್, ಮಾಜಿ ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ.ಸಿ.ಎನ್.ಅಶ್ವತ್ಥನಾರಾಯಣ್, ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್, ದೊಡ್ಡನಗೌಡ ಪಾಟೀಲ್, ಎನ್.ರವಿಕುಮಾರ್, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು ಇನ್ನುಳಿದವರು ಉಪಸ್ಥಿತರಿದ್ಧರು.
