Dharwad

ಧಾರವಾಡದಲ್ಲಿ‌ ಬೀದಿಗೆ ಇಳಿದ ಅಡುಗೆ ಸಹಾಯಕಿಯರು….ಅಡುಗೆ ಸಿಬ್ಬಂದಿಗೆ ಕನಿಷ್ಠ ವೇತನ ಜಾರಿ ಮಾಡುವಂತೆ ಆಗ್ರಹ.

Share

ರಾಜ್ಯದ ವಿವಿಧ ಇಲಾಖೆಯಲ್ಲಿ ಕೆಲಸ ಮಾಡುವ ಅಡುಗೆ ಮಾಡುವ ಸಿಬ್ಬಂದಿಗೆ ಕನಿಷ್ಠ ವೇತನ ಜಾರಿ ಮಾಡುವಂತೆ ಆಗ್ರಹಿಸಿ, ಧಾರವಾಡದಲ್ಲಿ ಅಡುಗೆ ಸಹಾಯಕಿಯರು ಬೀದಿಗೆ ಇಳಿದು ಪ್ರತಿಭಟನೆ ನಡೆಸಿ ತಮ್ಮ‌ ಆಕ್ರೋಶ ಹೊರಹಾಕಿದರು.

ವೈ- ಎಐಯುಟಿಯುಸಿ ಸಂಘಟನೆ ನೇತೃತ್ವದಲ್ಲಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸದ್ಯ ಅಡುಗೆ ಸಹಾಯಕಿಯರಿಗೆ 4700 ಮಾಸಿಕ ವೇತನ ನೀಡಲಾಗುತ್ತಿದೆ. ಈ ವೇತನ ಯಾವುದಕ್ಕೂ ಸಾಕಾಗುವುದಿಲ್ಲ. ಕನಿಷ್ಠ 10 ಸಾವಿರ ವೇತನವನ್ನಾದರೂ ನೀಡಬೇಕು. ಇದರ ಜೊತೆಗೆ ಜೀವವಿಮೆ ಪ್ರೀಮಿಯಂ ಒದಗಿಸಬೇಕು ಹಾಗೂ ಬಿಸಿಯೂಟ ಕಾರ್ಮಿಕರಿಗೆ ಸೇವಾ ಭದ್ರತೆ ಒದಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

Tags:

error: Content is protected !!