Vijaypura

ಪಡಿತರ ಅಕ್ಕಿ ಕಳ್ಳ ಸಾಗಟ 10ಲಕ್ಷ ಮೌಲ್ಯದ ವಸ್ತು ವಶಕ್ಕೆ

Share

ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಅಕ್ರಮವಾಗಿ ಅಕ್ಕಿ ಸಾಗಾಟ ಮಾಡುತ್ತಿದ್ದ ವೇಳೆ ಆಹಾರ ನಿರೀಕ್ಷಕರು ಹಾಗೂ ಪೊಲೀಸರು ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ 1.19 ಲಕ್ಷ ರೂ. ಮೌಲ್ಯದ 4270 ಕೆಜಿ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ. ಘಟನಾ ಸ್ಥಳದಿಂದ ಎಂಎಚ್ 13 ಎಎ 3745 ನೋಂದಣಿ ಸಂಖ್ಯೆಯ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಚಾಲಕ ಪರಾರಿಯಾಗಿದ್ದಾನೆ. ಸುಮಾರು 8 ಲಕ್ಷ ರೂ. ಮೌಲ್ಯದ ವಾಹನವನ್ನು ವಶಪಡಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಈ ಸಂಬಂಧ ಇಂಡಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:

error: Content is protected !!