ಅಂತರ ಜಿಲ್ಲಾ ದ್ವಿಚಕ್ರ ವಾಹನ ಕಳ್ಳನ ಬಂಧನ ಮಾಡುವಲ್ಲಿ ಕೇಶ್ವಾಪೂರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.
ನಗರದ ಭರತ ಶ್ಯಾಗೋಟಿ ಎಂಬವರ ದ್ವಿಚಕ್ರ ವಾಹನ ಕಳ್ಳತನವಾಗಿತ್ತು. ಪ್ರಕರಣ ದಾಖಲಿಸಿಕೊಂಡ ತನಿಖೆ ಆರಂಭಿಸಿದ ಕೇಶ್ವಾಪೂರ ಠಾಣೆ ಪೊಲೀಸರು ಆರೋಪಿ ಸಯ್ಯದ್ ಅಲಿ ಅಲಿಯಾಸ್ ಹರ್ಷಾ ಅಲಿಯಾಸ್ ಹರ್ಷವರ್ಧನ ನದಾಫ್ ಎಂಬಾತನಿಂದ 20 ಲಕ್ಷಕ್ಕೂ ಅಧಿಕ ಬೆಲೆಬಾಳುವ 12 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿದ್ದಾರೆ.
ಆರೋಪಿಯು ಈ ಎಲ್ಲಾ ದ್ವಿಚಕ್ರ ವಾಹನಗಳನ್ನು ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ ನಗರಗಳಲ್ಲಿ ಕಳ್ಳತನ ಮಾಡಿರುತ್ತಾರೆ ಎಂದು ತನಿಖೆಯಿಂದ ತಿಳಿದು ಬಂದಿದೆ.

