Vijaypura

ಹೊರಗುತ್ತಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಎಚ್ಚರಿಕೆ

Share

ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ವಿವಿಧ ವೃಂದದ ಹೊರಗುತ್ತಿಗೆ ನೌಕರರ ಸಂಘವು ಸರ್ಕಾರದ ವಿರುದ್ಧ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಎಚ್ಚರಿಕೆ ನೀಡಿದೆ. ಫೆಬ್ರವರಿ ಅಂತ್ಯದಲ್ಲಿ ಅಥವಾ ಮಾರ್ಚ್ ಮೊದಲ ವಾರದಲ್ಲಿ ರಾಜ್ಯಾದ್ಯಂತ ಮುಷ್ಕರ ಹಮ್ಮಿಕೊಳ್ಳಲು ತೀರ್ಮಾನಿಸಿದ್ದು, ಈ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯಲ್ಲಿ ಸಾಂಕೇತಿಕ ಮುಷ್ಕರ ಆರಂಭಿಸಿರುವದಾಗಿ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ. ಇಂದು ವಿಜಯಪುರ ‌ನಗರದ ಜಿಲ್ಲಾಧಿಕಾರಿ ಕಛೇರಿಯ ಆವರಣದಲ್ಲಿ ಮುಷ್ಕರ ಆರಂಭಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿದರು. ಸಂಘವು ಕಾರ್ಮಿಕ ಕಾಯ್ದೆಯಡಿ ಬೆಂಗಳೂರು ಉಪಕಾರ್ಮಿಕ ಆಯುಕ್ತರ ಕಚೇರಿಯಲ್ಲಿ ನೋಂದಾಯಿತವಾಗಿದ್ದು, ಇದುವರೆಗೆ ಸುಮಾರು 3,000ಕ್ಕೂ ಅಧಿಕ ಸದಸ್ಯರನ್ನು ಹೊಂದಿದ್ದು. ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಆಯುಷ್ ಇಲಾಖೆಗಳಡಿ ರಾಜ್ಯಾದ್ಯಂತ ಸುಮಾರು 25,000 ಹೊರಗುತ್ತಿಗೆ ನೌಕರರನ್ನು ಪ್ರತಿನಿಧಿಸುತ್ತಿದೆ ಎಂದು ತಿಳಿಸಿದರು.ಮಾದ್ಯಮದ ಜೊತೆ ಮಾತನಾಡಿದ ಅವರು ನೌಕರರ ಸಮಸ್ಯೆಗಳ ಕುರಿತು ಹಲವು ಬಾರಿ ಮೌಖಿಕ ಹಾಗೂ ಲಿಖಿತ ಮನವಿಗಳನ್ನು ಸರ್ಕಾರಕ್ಕೆ ಸಲ್ಲಿಸಿದರೂ ಯಾವುದೇ ಸ್ಪಷ್ಟ ಪರಿಹಾರ ದೊರೆತಿಲ್ಲ. ಸರ್ಕಾರದಿಂದ ದಿನಕ್ಕೊಂದು ಹೇಳಿಕೆ ನೀಡುತ್ತಿರುವದರಿಂದ ನೌಕರರಲ್ಲಿ ಗೊಂದಲ ಉಂಟಾಗಿದೆ ಮತ್ತು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ
ಈ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ರಾಜ್ಯಮಟ್ಟದ ಸರ್ವಸದಸ್ಯರ ಸಭೆ ನಡೆಸಿ ನೌಕರರ ಅಭಿಪ್ರಾಯ ಸಂಗ್ರಹಿಸಲಾಗಿದೆ.ಮತ್ತು ಸಭೆಯಲ್ಲಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಎಲ್ಲರೂ ಒಮ್ಮತ ಸಹ ಸೂಚಿಸಿದ್ದಾರೆ ಎಂದರು.

Tags:

error: Content is protected !!