BELAGAVI

ಬೆಳಗಾವಿಯಲ್ಲಿ ಬಿಜೆಪಿ ಮಹಾನಗರ ಜಿಲ್ಲಾ ಕಾರ್ಯಕಾರಿಣಿ ಸಭೆ: ಮುಂಬರುವ ಸವಾಲುಗಳಿಗೆ ಪಕ್ಷ ಸಂಘಟನೆಯ ‘ಪ್ರಶಿಕ್ಷಣ’ ಮಂತ್ರ!

Share

ಬೆಳಗಾವಿಯ ಮಹಾನಗರ ಜಿಲ್ಲಾ ಬಿಜೆಪಿ ವತಿಯಿಂದ ಇಂದು ಮಹತ್ವದ ಕಾರ್ಯಕಾರಿಣಿ ಸಭೆ ಹಾಗೂ ಪ್ರಶಿಕ್ಷಣ ವರ್ಗವನ್ನು ಆಯೋಜಿಸಲಾಗಿತ್ತು. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹಾಗೂ ಶಾಸಕ ಅಭಯ ಪಾಟೀಲ್ ಸೇರಿದಂತೆ ಘಟಾನುಘಟಿ ನಾಯಕರ ಉಪಸ್ಥಿತಿಯಲ್ಲಿ ಪಕ್ಷ ಸಂಘಟನೆಯ ಕುರಿತು ಗಂಭೀರ ಚರ್ಚೆ ನಡೆಯಿತು.

ಭಾರತೀಯ ಜನತಾ ಪಾರ್ಟಿ ಬೆಳಗಾವಿ ಮಹಾನಗರ ಜಿಲ್ಲಾ ಘಟಕದ ವತಿಯಿಂದ ಇಂದು ‘ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಪ್ರಶಿಕ್ಷಣ ವರ್ಗ’ ಹಾಗೂ ಜಿಲ್ಲಾ ಕಾರ್ಯಕಾರಿಣಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ಅವರು ಭಾಗವಹಿಸಿ, ಪಕ್ಷದ ಸಿದ್ಧಾಂತ ಮತ್ತು ಕಾರ್ಯಕರ್ತರ ಜವಾಬ್ದಾರಿಗಳ ಕುರಿತು ಮಾರ್ಗದರ್ಶನ ನೀಡಿದರು. ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷೆ ಶ್ರೀಮತಿ ಗೀತಾ ಸುತಾರ ವಹಿಸಿದ್ದರು. ತೆಲಂಗಾಣ ರಾಜ್ಯ ಬಿಜೆಪಿ ಉಸ್ತುವಾರಿ ಹಾಗೂ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ್ ಅವರು ಸಂಘಟನಾತ್ಮಕ ಬಲವರ್ಧನೆಯ ಕುರಿತು ಕಾರ್ಯಕರ್ತರಲ್ಲಿ ಸ್ಫೂರ್ತಿ ತುಂಬಿದರು.

ಈ ಪ್ರಮುಖ ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ, ಮಹಾಪೌರ ಮಂಗೇಶ್ ಪವಾರ್, ಉಪಮಹಾಪೌರರಾದ ವಾಣಿ ಜೋಶಿ ಹಾಗೂ ಮಾಜಿ ಸಂಸದೆ ಮಂಗಲ ಸುರೇಶ ಅಂಗಡಿ ಸೇರಿದಂತೆ ಹಿರಿಯ ನಾಯಕರು ಉಪಸ್ಥಿತರಿದ್ದರು. ಮಾಜಿ ಶಾಸಕ ಸಂಜಯ್ ಪಾಟೀಲ್, ಸಭಾ ನಾಯಕರು ಹಾಗೂ ನಗರ ಸೇವಕ ಹಣಮಂತ ಕೊಂಗಾಲಿ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಭಾಗವಹಿಸಿ ಮುಂಬರುವ ರಾಜಕೀಯ ಸವಾಲುಗಳ ಬಗ್ಗೆ ಚರ್ಚಿಸಿದರು. ರಮೇಶ ದೇಶಪಾಂಡೆ, ಎಂ.ಬಿ. ಜಿರಲಿ, ರಾಜೇಂದ್ರ ಹರಕುಣಿ ಹಾಗೂ ಶಶಿ ಪಾಟೀಲ್ ಅವರಂತಹ ಹಿರಿಯ ಮುಖಂಡರ ಉಪಸ್ಥಿತಿಯು ಸಭೆಗೆ ವಿಶೇಷ ಮೆರುಗು ನೀಡಿತು. ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಈರಯ್ಯ ಖೋತ, ರಾಜಶೇಖರ್ ಡೋಣಿ ಮತ್ತು ಗಣೇಶ ದೇಸಾಯ ಅವರು ಕಾರ್ಯಕ್ರಮವನ್ನು ಸಮನ್ವಯಗೊಳಿಸಿದರು.

Tags:

error: Content is protected !!