Vijaypura

ಚಾಲಕನ ನಿಯಂತ್ರಣ ತಪ್ಪಿ ಡಿವೈಡರಿಗೆ ಗುದ್ದಿದ ಲಾರಿ

Share

ವಿಜಯಪುರ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಹಣ್ಣುಗಳನ್ನು ತುಂಬಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕನಿಗೆ ಗಂಭೀರ ಗಾಯವಾಗಿದೆ. ಘಟನಾ ಸ್ಥಳಕ್ಕೆ ವಿಜಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳು ಚಾಲಕನನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಈ ಘಟನೆ ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Tags:

error: Content is protected !!