ವಿಜಯಪುರದಲ್ಲಿ ಕಾಂಗ್ರೆಸ್ ಮುಖಂಡ ಗಿರೀಶ್ ಇಟ್ಟಂಗಿಹಾಳ ಅವರು ಮಾದ್ಯಮಗಳ ಜೊತೆಗೆ ಮಾತನಾಡಿ ಮಹಾನಗರ ಪಾಲಿಕೆಯ ಸದಸ್ಯ ಪ್ರೇಮಾನಂದ ಬಿರಾದಾರ್ ಹಾಗೂ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ರವರು ನಗರದ ಮುಖ್ಯ ರಸ್ತೆಯ ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಕಳೆದ ವರ್ಷ ಉದ್ಘಾಟನೆಯಾಗಿದ್ದ ಕೋರ್ಟ್ ಸರ್ಕಲ್ನಿಂದ ಬಿಡಿ ಕಚೇರಿಯವರೆಗಿನ ರಸ್ತೆ ಸಂಪೂರ್ಣವಾಗಿ ಕಿತ್ತು ಹೋಗಿದ್ದು, ಇದರಲ್ಲಿ ಶಾಸಕರು ಹಾಗೂ ಪಾಲಿಕೆ ಸದಸ್ಯರು ಭ್ರಷ್ಟಾಚಾರ ಎಸಗಿದ್ದಾರೆ ಎಂದು ಆರೋಪಿಸಿದರು.

