ರಾಜ್ಯದಲ್ಲಿ ದಲಿತ ಸಮುದಾಯದ ನ್ಯಾಯಯುತ ಬೇಡಿಕೆಗಳಿಗಾಗಿ ಇಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಬೀದಿಗಿಳಿದಿದೆ. ಒಳ ಮೀಸಲಾತಿಯ ರೋಸ್ಟರ್ ಬಿಂದು ಗೊಂದಲ ಹಾಗೂ ದಲಿತರ ಸ್ಮಶಾನ ಭೂಮಿಯ ಸಮಸ್ಯೆಯನ್ನು ಬಗೆಹರಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಿದೆ.

ಒಳ ಮೀಸಲಾತಿ ಅನುಷ್ಠಾನದಲ್ಲಿ ಸೃಷ್ಟಿಯಾಗಿರುವ ರೋಸ್ಟರ್ ಬಿಂದು ಗೊಂದಲಗಳನ್ನು ಕೂಡಲೇ ಸರಿಪಡಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಬುಧವಾರ ಬೃಹತ್ ಪ್ರತಿಭಟನೆ ನಡೆಸಿತು. ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಸಲ್ಲಿಸಿದ ಸಮಿತಿಯು, ರಾಜ್ಯದಲ್ಲಿ ನಾಗರಿಕ ಹಕ್ಕುಗಳ ರಕ್ಷಣೆ ಮತ್ತು ದೌರ್ಜನ್ಯ ತಡೆ ಕಾಯ್ದೆಗಳು ಸಮರ್ಪಕವಾಗಿ ಜಾರಿಯಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿತು. ಈ ಕಾಯ್ದೆಗಳ ಅಡಿ ನಡೆಯುವ ವಿಚಾರಣೆಗಳ ಮೇಲೆ ನಿಗಾವಹಿಸಲು ಪ್ರತ್ಯೇಕ ಸಮಿತಿ ರಚಿಸಬೇಕು ಹಾಗೂ ಪ್ರತಿ ಗ್ರಾಮದಲ್ಲಿ ದಲಿತರಿಗೆ ಕಡ್ಡಾಯವಾಗಿ ಸ್ಮಶಾನ ಭೂಮಿ ಮೀಸಲಿಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಸಾಮಾಜಿಕ ನ್ಯಾಯದ ಹಿನ್ನೆಲೆಯಲ್ಲಿ ಖಾಸಗಿ ಕ್ಷೇತ್ರಗಳಲ್ಲೂ ಮೀಸಲಾತಿ ಜಾರಿಗೊಳಿಸಬೇಕು ಮತ್ತು ಎಸ್.ಸಿ, ಎಸ್.ಟಿ ಸಮುದಾಯದ ಬಾಕಿ ಇರುವ ಬ್ಯಾಕ್‌ಲಾಗ್ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂಬುದು ಸಮಿತಿಯ ಪ್ರಮುಖ ಆಗ್ರಹವಾಗಿದೆ. ಜೊತೆಗೆ, ಫಾರಂ 57 ರ ಅಡಿಯಲ್ಲಿ ಅರ್ಜಿ ಸಲ್ಲಿಸಿರುವವರಿಗೆ ತಕ್ಷಣವೇ ಸಾಗುವಳಿ ಚೀಟಿ ಹಾಗೂ ಹಕ್ಕುಪತ್ರ ವಿತರಿಸಬೇಕು ಮತ್ತು ಹೊಸದಾಗಿ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಬೇಕು ಎಂದು ದಸಂಸ ನಾಯಕರು ಈ ಸಂದರ್ಭದಲ್ಲಿ ಸರ್ಕಾರವನ್ನು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿಯ ಪದಾದಿಕಾರಿಗಳು ಮತ್ತು ಕಾರ್ಯಕರ್ತರು
