BELAGAVI

ಬೆಳಗಾವಿಗೆ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಆಗಮನ: ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಗಣ್ಯರಿಂದ ಭವ್ಯ ಸ್ವಾಗತ

Share

ಭಾರತದ ಉಪ ರಾಷ್ಟ್ರಪತಿಗಳಾದ ಸಿ.ಪಿ. ರಾಧಾಕೃಷ್ಣನ್ ಅವರು ಇಂದು ಕುಂದಾನಗರಿ ಬೆಳಗಾವಿಗೆ ಭೇಟಿ ನೀಡಿದ್ದಾರೆ. ಚಿಕ್ಕೋಡಿ ತಾಲ್ಲೂಕಿನ ಯಡೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಅವರಿಗೆ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ ಕೋರಲಾಯಿತು.”

ಘನತೆವೆತ್ತ ಉಪ ರಾಷ್ಟ್ರಪತಿಗಳಾದ ಸಿ.ಪಿ. ರಾಧಾಕೃಷ್ಣನ್ ಅವರು ಗುರುವಾರ ಬೆಳಿಗ್ಗೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದ ಮೂಲಕ ಆಗಮಿಸಿದರು. ಈ ಸಂದರ್ಭದಲ್ಲಿ ಕರ್ನಾಟಕದ ಘನತೆವೆತ್ತ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರು ಉಪ ರಾಷ್ಟ್ರಪತಿಗಳನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಯಡೂರು ಗ್ರಾಮದಲ್ಲಿ ನಡೆಯುತ್ತಿರುವ ಪವಿತ್ರ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದು ಈ ಭೇಟಿಯ ಮುಖ್ಯ ಉದ್ದೇಶವಾಗಿದೆ.

ವಿಮಾನ ನಿಲ್ದಾಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ ಹಾಗೂ ಮೇಯರ್ ಮಂಗೇಶ್ ಪವಾರ್ ಅವರು ಪುಷ್ಪಗುಚ್ಛ ನೀಡಿ ಗೌರವಿಸಿದರು. ಈ ವೇಳೆ ಪ್ರಾದೇಶಿಕ ಆಯುಕ್ತರಾದ ಜಾನಕಿ ಕೆ.ಎಂ. ಮತ್ತು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದು ಶಿಷ್ಟಾಚಾರದಂತೆ ಸ್ವಾಗತಿಸಿದರು. ಬಳಿಕ ಉಪ ರಾಷ್ಟ್ರಪತಿಗಳು ಬಿಗಿ ಭದ್ರತೆಯೊಂದಿಗೆ ಯಡೂರಿನ ಕಾರ್ಯಕ್ರಮದತ್ತ ಪ್ರಯಾಣ ಬೆಳೆಸಿದರು.

Tags:

error: Content is protected !!