ರಾಜ್ಯ ಸರ್ಕಾರ ಬಜೆಟ್ ನಲ್ಲಿ ಪರಿಷ್ಕೃತ ಕನಿಷ್ಠ ವೇತನ ಜಾರಿಗೆ ತರಬೇಕು ಹಾಗೂ ಸೇವಾ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿ, ಧಾರವಾಡದಲ್ಲಿ ವಸತಿ ನಿಲಯ ಕಟ್ಟಡ ಕಾರ್ಮಿಕರು ಬೀದಿಗೆ ಇಳಿದು ಪ್ರತಿಭಟನೆ ಮಾಡಿ ತಮ್ಮ ಆಕ್ರೋಶ ಹೊರಹಾಕಿದರು.

ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘದ ಸದಸ್ಯರು ಹಾಗೂ ಪದಾಧಿಕಾರಿಗಳು ಪ್ರತಿಭಟನೆ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ವಸತಿ ನಿಲಯ ಕಾರ್ಮಿಕರ ನ್ಯಾಯಯುತ ಬೇಡಿಕೆ ಈಡೇರಿಕೆಗೆ ಸರ್ಕಾರ ಮುಂದಾಗಬೇಕು ಹಾಗೂ ಕನಿಷ್ಠ ವೇತನ, ಸೇವಾ ಭದ್ರತೆ, ಆರೋಗ್ಯ ಸೌಲಭ್ಯ, ರಜೆ ಸೌಲಭ್ಯ ಒದಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಇನ್ನೂ ಪ್ರತಿಭಟನೆಯಲ್ಲಿ ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಬಡಿಗೇರ, ಜಿಲ್ಲಾ ಉಪಾಧ್ಯಕ್ಷೆ ಶೈನಾಜ ಹುಡೆದಮನಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
