ಖಾನಾಪೂರ ತಾಲೂಕಿನ ತೊಲಗಿ ಗ್ರಾಮದ ಗ್ರಾಮ ದೇವಿಯ ಜಾತ್ರಾ ಮಹೋತ್ಸವವು ಇದೇ ಏಪ್ರಿಲ್ 20 ರಂದು ಅತ್ಯಂತ ಸಡಗರ-ಸಂಭ್ರಮದಿಂದ ಜರುಗಲಿದೆ.


ಈ ಜಾತ್ರೆಯ ಪೂರ್ವತಯಾರಿ ಹಾಗೂ ಗ್ರಾಮದ ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚಿಸಲು ತೊಲಗಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ವಿಶೇಷ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಗ್ರಾಮಸ್ಥರೊಂದಿಗೆ ಸಂವಾದ ನಡೆಸಿದ ಶಾಸಕ ವಿಠ್ಠಲ ಹಲಗೇಕರ
ಜಾತ್ರೆಗೆ ಆಗಮಿಸುವ ಸಾವಿರಾರು ಭಕ್ತಾದಿಗಳ ಅನುಕೂಲಕ್ಕಾಗಿ ಕುಡಿಯುವ ನೀರು, ನಿರಂತರ ವಿದ್ಯುತ್ ಸಂಪರ್ಕ ಮತ್ತು ನೈರ್ಮಲ್ಯದ ಬಗ್ಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ಸೂಚನೆ ನೀಡಿದರು

ಅಭಿವೃದ್ಧಿ ಕಾಮಗಾರಿಗಳಾದ ಗ್ರಾಮದ ಒಳಗಿನ ರಸ್ತೆಗಳು, ಚರಂಡಿ ವ್ಯವಸ್ಥೆ ಮತ್ತು ದೇವಸ್ಥಾನದ ಆವರಣದಲ್ಲಿ ಬಾಕಿ ಉಳಿದಿರುವ ನಿರ್ಮಾಣ ಕಾರ್ಯಗಳನ್ನು ಜಾತ್ರೆಯ ಮೊದಲು ಆದ್ಯತೆಯ ಮೇಲೆ ಪೂರ್ಣಗೊಳಿಸುವ ಬಗ್ಗೆ ಸಕಾರಾತ್ಮಕ ಚರ್ಚೆ ನಡೆಸಲಾಯಿತು.ಅದರಂತೆಯೇ
ಸಾರಿಗೆ ಸೌಲಭ್ಯ ಕುರಿತು ಭಕ್ತರ ಅನುಕೂಲಕ್ಕಾಗಿ ಹೆಚ್ಚಿನ ಬಸ್ ಸೌಲಭ್ಯಗಳನ್ನು ಕಲ್ಪಿಸುವಂತೆ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಸೂಚಿನೆ ನೀಡಲಾಯಿತು.
“ಧಾರ್ಮಿಕ ಉತ್ಸವಗಳು ಸಾಮಾಜಿಕ ಒಗ್ಗಟ್ಟಿನ ಸಂಕೇತವಾಗಿವೆ. ಜಾತ್ರೆಗೆ ಬರುವ ಪ್ರತಿಯೊಬ್ಬ ಭಕ್ತನಿಗೂ ಉತ್ತಮ ಸೌಲಭ್ಯ ಸಿಗಬೇಕು ಮತ್ತು ಗ್ರಾಮದ ಸರ್ವತೋಮುಖ ಅಭಿವೃದ್ಧಿಯಾಗಬೇಕು ಎಂಬುದು ನಮ್ಮ ಗುರಿ. ಗ್ರಾಮದ ಅಭಿವೃದ್ಧಿಗೆ ಅನುದಾನದ ಕೊರತೆಯಾಗದಂತೆ ನಾವು ಬದ್ಧರಾಗಿದ್ದೇವೆ.ಎಂದು ಶಾಸಕ ವಿಠ್ಠಲ ಹಲಗೇಕರ ಹೇಳಿದರು”
ಈ ಸಂದರ್ಭದಲ್ಲಿ ಗ್ರಾಮದ ಪಂಚ ಕಮಿಟಿಯ ಪದಾಧಿಕಾರಿಗಳು, ಗಣ್ಯ ನಾಗರಿಕರು, ಪಿಡಿಒ ಸ್ಥಳೀಯ, ಯುವಕ ಮಂಡಳಿಯ ಸದಸ್ಯರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು .
