DEATH

ಧಾಕಲು ಫಕಿರಾ ಬಿಳಗೋಜಿ ನಿಧನ

Share

ಬೆಳಗಾವಿ ತಾಲ್ಲೂಕಿನ ಹಲಗಾ ಗ್ರಾಮದ ಹಿರಿಯ ಪ್ರಗತಿಪರ ರೈತರು ಹಾಗೂ ದೇವಸ್ಥಾನ ಪಂಚ ಕಮಿಟಿಯ ಅಧ್ಯಕ್ಷರಾದ ಧಾಕಲು ಫಕಿರಾ ಬಿಳಗೋಜಿ (೮೮) ಅವರು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ.
ಕಳೆದ 60 ವರ್ಷಗಳಿಗೂ ಹೆಚ್ಚು ಕಾಲ ಹಲಗಾದ ಹಜರತ್ ಬೀಬಿ ಫಾತಿಮಾ ದರ್ಗಾದ ಮುಖ್ಯ ಸೇವಕರಾಗಿ ಸೇವೆ ಸಲ್ಲಿಸಿದ್ದ ಇವರು, ಧಾರ್ಮಿಕ ಮತ್ತು ಸಾಮಾಜಿಕ ಸಾಮರಸ್ಯದ ಸಂಕೇತವಾಗಿದ್ದರು. ವಿವಿಧ ಧರ್ಮದ ಭಕ್ತರ ಸಮಸ್ಯೆಗಳನ್ನು ತಾಳ್ಮೆಯಿಂದ ಆಲಿಸಿ ಪರಿಹರಿಸುವಲ್ಲಿ ಇವರ ಪಾತ್ರ ದೊಡ್ಡದಾಗಿತ್ತು.ಅವರ ನಿಧನದಿಂದ ಹಲಗಾ ಗ್ರಾಮದ ಹಿರಿಯ ಕೊಂಡಿಯೊಂದು ಕಳಚಿದಂತಾಗಿದೆ. ಮೃತರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

Tags:

error: Content is protected !!