ಚಿಕ್ಕೋಡಿ:ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್ ದಿಕ್ಕು ದೆಸೆ ಇಲ್ಲದ ಪ್ರಗತಿ ಶೂನ್ಯ ಬಜೆಟ್ ಆಗಿದ್ದು, ಸಾಲದ ಶೂಲಕ್ಕೆ ರಾಜ್ಯವನ್ನು ತೆಗೆದುಕೊಂಡು ಹೋಗುವ ಬಜೆಟ್ ಇದಾಗಿದೆ, ಇದರಿಂದ ರಾಜ್ಯದ ಹಣಕಾಸಿನ ಮೇಲೆ ಬಹಳ ದೊಡ್ಡ ಪರಿಣಾಮ ಬೀರಲಿದೆ ಎಂದು ಮಾಜಿ ಸಚಿವೆ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಹೇಳಿದರು.

ಹೊಸ ತೆರಿಗೆ ಹಾಕಿ ರಾಜ್ಯವನ್ನು ಹತ್ತರಿಂದ 15 ವರ್ಷ ಹಿಂದೆ ತೆಗೆದುಕೊಂಡು ಹೋಗುತ್ತದೆ. ಇದರಿಂದ ನಿರಾಸೆಯಾಗಿದೆ 17 ಬಾರಿ ಬಜೆಟ್ ಮಂಡನೆ ಮಾಡಿರುವ ಸಿಎಂರಿಂದ ಇದನ್ನು ನಿರೀಕ್ಷೆ ಮಾಡಿರಲಿಲ್ಲ ಎಂದು ಹೇಳಿದರು.
ಈ ಬಾರಿ ಬಜೆಟ್ ಎಲ್ಲಾ ವರ್ಗಗಳಿಗೆ ನೀರಾಶಾದಾಯಕವಾಗಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ ಪ್ರತಿಕ್ರಿಯಿಸಿದ್ದಾರೆ.
“ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು” ಕೊಡುತ್ತೇವೆ ಎಂದು ಹೇಳಿ “ಸರ್ವರಿಗೂ ತೆರಿಗೆ, ಸರ್ವರಿಗೂ ಸಾಲ” ಎಂಬ ಸ್ಥಿತಿ ನಿರ್ಮಿಸಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ 17ನೇ ಬಜೆಟ್ ₹ 4.48 ಲಕ್ಷ ಕೋಟಿ ಬೃಹತ್ ಗಾತ್ರದ ಹೆಗ್ಗಳಿಕೆಗಷ್ಟೇ ಸೀಮಿತ.
ಅಭಿವೃದ್ಧಿ ಯೋಜನೆಗಳಿಗೆ ಹಣ ಮೀಸಲಿಡುವ ಬದಲು ಸಾಲದ ಬಲೆಗೆ ರಾಜ್ಯವನ್ನು ತಳ್ಳುತ್ತಿರುವುದು ಈ ಬಜೆಟ್ ನ ಕಹಿಸತ್ಯ
