• ಬೆಳಗಾವಿಯಲ್ಲಿ ಜೆಡಿಎಸ್ ಕಾರ್ಯಕರ್ತರ ತೀವ್ರ ಪ್ರತಿಭಟನೆ
• ಸಿಎಂ ಬಜೆಟ್ ವಿರುದ್ಧ ಆಕ್ರೋಶದ ಘೋಷಣೆ
• ಸಾಲದ ಸುಳಿಯಲ್ಲಿ ರಾಜ್ಯ ಸರ್ಕಾರ ಆತಂಕ.
• ಜಿಲ್ಲೆಗೆ ಸಮರ್ಪಕ ಅನುದಾನ ನೀಡದ ಅಸಮಾಧಾನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಜೆಟ್ ವಿರುದ್ಧ ಜೆಡಿಎಸ್ ಕಾರ್ಯಕರ್ತರು ನಗರದ ಚನ್ನಮ್ಮ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
ರಸ್ತೆ ಮೇಲೆ ಕುಳಿತು ಧರಣಿ ನಡೆಸಿದ ಜೆಡಿಎಸ್ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಜೆಡಿಎಸ್ ಜಿಲ್ಲಾಧ್ಯಕ್ಷ ಶಂಕರ್ ಮಾಡಲಗಿ ಸಿಎಂ ಸಿದ್ದರಾಮಯ್ಯ ಅವಧಿಯಲ್ಲಿ ರಾಜ್ಯ ಅತ್ಯಧಿಕ ಸಾಲದಲ್ಲಿ ಮುಳುಗಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ರಾಜ್ಯ ಸರ್ಕಾರದ ಆರ್ಥಿಕ ನೀತಿಗಳ ವಿರುದ್ಧ ತೀವ್ರ ಟೀಕೆ ವ್ಯಕ್ತಪಡಿಸಿದರು. ಬೆಳಗಾವಿ ಜಿಲ್ಲೆಗೆ ಸಮರ್ಪಕ ಅನುದಾನ ನೀಡಿಲ್ಲ ಹಾಗೂ ಯಾವುದೇ ಹೊಸ ಯೋಜನೆಗಳನ್ನು ಘೋಷಿಸಿಲ್ಲ ಎಂದು ಅವರು ಆರೋಪಿಸಿದರು. ನೀರಾವರಿ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಗೃಹ ಲಕ್ಷ್ಮೀ ಯೋಜನೆಗೂ ಸರಿಯಾಗಿ ಹಣ ನೀಡಲಾಗುತ್ತಿಲ್ಲ ಎಂದು ಆರೋಪಿಸಿದರು. ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಪ್ರತಿಭಟನಾಕಾರರು ದೂರಿದರು. ಬೈಟ್
ಈ ಸಂದರ್ಭದಲ್ಲಿ ಜೆ.ಡಿ.ಎಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ಧರು.
