Belagavi

ಲಾಡ್ಜ್’ಗಳಲ್ಲಿ ಕಳ್ಳತನ ಮಾಡುತ್ತಿದ್ದ ಮಹಿಳೆ ಅರೆಸ್ಟ್; ಲಕ್ಷಾಂತರ ಮೌಲ್ಯದ ಸ್ವತ್ತು ವಶ

Share

ಬೆಳಗಾವಿ ನಗರದ ಲಾಡ್ಜ್’ಗಳಲ್ಲಿ ಸರಣಿ ಕಳ್ಳತನ ನಡೆಸುತ್ತಿದ್ದ ಮಹಿಳೆಯೊಬ್ಬಳನ್ನು ತಿಲಕವಾಡಿ ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿಯ ಕೋಸ್ಟಲ್ ಎಂಪೈರ್ ಮತ್ತು ಅಮಿತ್ ಡಿಲಕ್ಸ್ ಲಾಡ್ಜ್‌ಗಳಲ್ಲಿ ಕಳ್ಳತನ ನಡೆಸುತ್ತಿದ್ದ ಆರೋಪದ ಮೇಲೆ ದೀಪಾ ಮಹಾಲಿಂಗ ಅವಟಗಿ ಎಂಬಾಕೆಯನ್ನು ತಿಲಕವಾಡಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತಳಿಂದ ಸುಮಾರು 32.86 ಲಕ್ಷ ರೂ. ಮೌಲ್ಯದ 11 ಮೊಬೈಲ್‌ಗಳು, ಎರಡು ಕಾರುಗಳು, ಟ್ಯಾಬ್ ಮತ್ತು ನಗದನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಈ ಪ್ರಕರಣದಲ್ಲಿ ಭಾಗಿಯಾಗಿರುವ ಮತ್ತೋರ್ವ ಆರೋಪಿ ಶಿವಾನಂದ ಮಠಪತಿ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.
ತಿಲಕವಾಡಿ ಇನ್‌ಸ್ಪೆಕ್ಟರ್ ಪರಶುರಾಮ ಪೂಜೇರಿ ನೇತೃತ್ವದ ತಂಡ ಈ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಿರ್ವಹಿಸಿದೆ. ದಕ್ಷತೆಯಿಂದ ಕಾರ್ಯನಿರ್ವಹಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ಕಾರ್ಯವೈಖರಿಯನ್ನು ಬೆಳಗಾವಿ ನಗರ ಪೊಲೀಸ್ ಆಯುಕ್ತರು ಶ್ಲಾಘಿಸಿದ್ದು, ತಂಡಕ್ಕೆ ಬಹುಮಾನವನ್ನು ಘೋಷಿಸಿದ್ದಾರೆ.

Tags:

error: Content is protected !!