ವಿಜಯಪುರ ನಗರದ ರಂಭಾಪುರ ಬಡಾವಣೆಯ ರಿಂಗ್ ರೋಡ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಬದಿಯ ಕಂದಕಕ್ಕೆ ಬಿದ್ದಿದೆ. ಈ ಘಟನೆಯಲ್ಲಿ ಲಾರಿ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರು ಆತನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಜಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

