Athani

ಬಿಜೆಪಿ ನಾಯಕರಿಗೆ ಸವದಿ ‘ದಮ್ಮು-ತಾಕತ್ತಿನ’ ಸವಾಲು: ಉದ್ಯೋಗ ಮತ್ತು ಸಾಲದ ಲೆಕ್ಕ ಕೇಳಿದ ಶಾಸಕ ಲಕ್ಷ್ಮಣ ಸವದಿ!

Share

ಕೇಂದ್ರ ಮತ್ತು ರಾಜ್ಯ ಬಿಜೆಪಿ ನಾಯಕರ ವಿರುದ್ಧ ಶಾಸಕ ಲಕ್ಷ್ಮಣ ಸವದಿ ವಾಗ್ದಾಳಿ ನಡೆಸಿದ್ದಾರೆ. ದಮ್ಮು-ತಾಕತ್ತು ಇದ್ದರೆ ಕೇಂದ್ರದಿಂದ ಬರಬೇಕಾದ ಬಾಕಿ ಹಣ ತರಲಿ ಎಂದು ಸವಾಲು ಹಾಕಿರುವ ಅವರು, ಕಳೆದ 11 ವರ್ಷಗಳ ಸಾಲ ಮತ್ತು ಉದ್ಯೋಗದ ಲೆಕ್ಕವನ್ನು ಜನರ ಮುಂದಿಡಲಿ ಎಂದು ಗುಡುಗಿದ್ದಾರೆ.

ಬಿಜೆಪಿ ನಾಯಕರಿಗೆ ನೆನಪಿನ ಶಕ್ತಿ ಕಡಿಮೆಯಾಗಿದೆ ಎಂದು ಲೇವಡಿ ಮಾಡಿರುವ ಶಾಸಕ ಲಕ್ಷ್ಮಣ ಸವದಿ, ತಮ್ಮ 5 ವರ್ಷಗಳ ಆಡಳಿತಾವಧಿಯಲ್ಲಿ ಎಷ್ಟು ಯುವಕರಿಗೆ ಉದ್ಯೋಗ ನೀಡಿದ್ದಾರೆ ಎಂಬುದನ್ನು ಒಮ್ಮೆ ಸ್ಮರಿಸಿಕೊಳ್ಳಲಿ ಎಂದು ಕಿಡಿಕಾರಿದ್ದಾರೆ. 2014ರ ಮೊದಲು ಮನ್ಮೋಹನ್ ಸಿಂಗ್ ಅವರ ಸರ್ಕಾರವಿದ್ದಾಗ ದೇಶದ ಮೇಲಿದ್ದ ಒಟ್ಟು ಸಾಲವೆಷ್ಟು ಮತ್ತು ಕಳೆದ 11 ವರ್ಷಗಳಲ್ಲಿ ಪ್ರಸ್ತುತ ಕೇಂದ್ರ ಸರ್ಕಾರ ಮಾಡಿರುವ ಸಾಲವೆಷ್ಟು ಎಂಬುದರ ಬಗ್ಗೆ ಬಿಜೆಪಿ ನಾಯಕರು ಶ್ವೇತಪತ್ರ ಹೊರಡಿಸಲಿ ಎಂದು ಆಗ್ರಹಿಸಿದ್ದಾರೆ.

ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇವೆ ಎಂದು ಭರವಸೆ ನೀಡಿದ್ದ ಕೇಂದ್ರ ಸರ್ಕಾರ, ಕಳೆದ 11 ವರ್ಷಗಳಲ್ಲಿ 22 ಕೋಟಿ ಉದ್ಯೋಗ ನೀಡಿದೆಯೇ ಎಂದು ಪ್ರಶ್ನಿಸಿದ ಅವರು, ಬಿಜೆಪಿಯ ವೈಫಲ್ಯಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ನಾಯಕರಿಗೆ ನಿಜವಾಗಿಯೂ ದಮ್ಮು ತಾಕತ್ತು ಇದ್ದರೆ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಬಾಕಿ ಹಣವನ್ನು ತಂದು ತೋರಿಸಲಿ. ಕೇವಲ ಟೀಕೆ ಮಾಡುವುದನ್ನು ಬಿಟ್ಟು ಅಭಿವೃದ್ಧಿ ಕಡೆ ಗಮನ ಹರಿಸಲಿ ಎಂದು ಸವದಿ ಸವಾಲು ಹಾಕಿದ್ದಾರೆ.

Tags:

error: Content is protected !!