ಬೆಳಗಾವಿ ತಾಲ್ಲೂಕಿನ ಉಚಗಾಂವ ಗ್ರಾಮದಲ್ಲಿ ಆದಿಶಕ್ತಿ ಶ್ರೀ ಮಳೆಕರಣಿ ದೇವಿಯ ಸೋಹಳಾ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಅನ್ನಪ್ರಸಾದ ಸೇವೆಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಭಾನುವಾರ ಚಾಲನೆ ನೀಡಿದರು.


ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇವಿಯ ಕೃಪೆಯಿಂದ ಗ್ರಾಮದಲ್ಲಿ ಸದಾ ಸುಖ, ಶಾಂತಿ ಮತ್ತು ಸಮೃದ್ಧಿ ನೆಲೆಸಲಿ ಎಂದು ಪ್ರಾರ್ಥಿಸಿದರು. ಇಂತಹ ಧಾರ್ಮಿಕ ಕಾರ್ಯಕ್ರಮಗಳು ಸಮಾಜದಲ್ಲಿ ಭಕ್ತಿಭಾವದ ಜೊತೆಗೆ ಪರಸ್ಪರ ಸೌಹಾರ್ದತೆ ಮತ್ತು ಒಗ್ಗಟ್ಟನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಹೇಳಿದರು. ಗ್ರಾಮಸ್ಥರು ಒಟ್ಟಾಗಿ ದೇವಿಯ ಸೋಹಳಾವನ್ನು ಭಕ್ತಿಭಾವದಿಂದ ಆಚರಿಸುತ್ತಿರುವುದು ಶ್ಲಾಘನೀಯವೆಂದು ಅವರು ತಿಳಿಸಿದರು.
ಕಾರ್ಯಕ್ರಮದ ಭಾಗವಾಗಿ ನೂರಾರು ಭಕ್ತರಿಗೆ ಅನ್ನಪ್ರಸಾದ ವಿತರಿಸಲಾಯಿತು. ದೇವಿಯ ದರ್ಶನಕ್ಕಾಗಿ ಹಾಗೂ ಅನ್ನಪ್ರಸಾದ ಸ್ವೀಕರಿಸಲು ಸುತ್ತಮುತ್ತಲಿನ ಗ್ರಾಮಗಳಿಂದಲೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.

ಈ ಸಂದರ್ಭದಲ್ಲಿ ಕಾಡಾ ಅಧ್ಯಕ್ಷರಾದ ಯುವರಾಜ ಕದಂ, ಯುವ ಕಾಂಗ್ರೆಸ್ ಮುಖಂಡರಾದ ಮೃಣಾಲ್ ಹೆಬ್ಬಾಳಕರ್, ಗ್ರಾಮದ ಹಿರಿಯರು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ನೂರಾರು ಭಕ್ತಾಧಿಗಳು ಉಪಸ್ಥಿತರಿದ್ದರು.
