raybag

ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ!!! ರಾಯಬಾಗ ಹೊರವಲಯದ ಅರಣ್ಯ ಪ್ರದೇಶದಲ್ಲಿ ಘಟನೆ

Share

ರಾಯಬಾಗದಲ್ಲಿ ಯುವಕನ ಶವ ಪತ್ತೆ

ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಸಾವು

ಮೃತದೇಹದ ಬಳಿಯೇ ಸಿಕ್ಕಿತು ಬೈಕ್

ಪೊಲೀಸರಿಂದ ತನಿಖೆ ಚುರುಕು

ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ಇಂದು ಬೆಳ್ಳಂಬೆಳಿಗ್ಗೆ ಆತಂಕಕಾರಿ ಘಟನೆಯೊಂದು ಸಂಭವಿಸಿದೆ. ಪಟ್ಟಣದ ಹೊರವಲಯದ ಕೆರೆಯ ಸಮೀಪ ಯುವಕನೊಬ್ಬ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದ ಹೊರವಲಯದ ವ್ಯಾಪಾರಿ ಕೆರೆಯ ಪಕ್ಕದಲ್ಲಿರುವ ಅರಣ್ಯ ಪ್ರದೇಶದಲ್ಲಿ ಯುವಕನೊಬ್ಬ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಮೃತ ದುರ್ದೈವಿಯನ್ನು ಮೂಡಲಗಿ ತಾಲೂಕಿನ ಜೋಕಾನಟ್ಟಿ ಗ್ರಾಮದ ಲಕ್ಷ್ಮಣ ಹಿರಿಗೌಡರ (32) ಎಂದು ಗುರುತಿಸಲಾಗಿದೆ. ಮರಕ್ಕೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಮೃತದೇಹದ ಪಕ್ಕದಲ್ಲೇ ಯುವಕನ ಬೈಕ್ ಕೀ ಸಮೇತ ಸಿಕ್ಕಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಸ್ಥಳಕ್ಕೆ ರಾಯಬಾಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಇದು ಆತ್ಮಹತ್ಯೆಯೋ ಅಥವಾ ಬೇರೆನಾದರೂ ಕಾರಣವಿದೆಯೇ ಎಂಬ ನಿಟ್ಟಿನಲ್ಲಿ ತನಿಖೆ ಆರಂಭವಾಗಿದೆ. ಸದ್ಯ ರಾಯಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಯುವಕನ ಸಾವಿನ ಸುದ್ದಿ ತಿಳಿದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Tags:

error: Content is protected !!