Vijaypura

ಬುಲೆರೋ ವಾಹನಕ್ಕೆ ಬೈಕ್‌ ಡಿಕ್ಕಿ ಸ್ಥಳದಲ್ಲಿಯೇ ಬೈಕ್ ಸವಾರನ ಸಾವು

Share

ಬುಲೆರೋ ವಾಹನಕ್ಕೆ ಬೈಕ್‌ ಡಿಕ್ಕಿ ಸ್ಥಳದಲ್ಲಿಯೇ ಬೈಕ್ ಸವಾರನ ಸಾವು

ಆ್ಯಂಕರ್ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ರೂಗಿ ರಸ್ತೆಯಲ್ಲಿ ಬುಲೆರೋ ವಾಹನಕ್ಕೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ 40 ವರ್ಷದ ಶಶಿ ಜಿಗಜಿಣಿಗಿ ಎಂಬ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ದುರ್ಘಟನೆ ಇಂಡಿ ಗ್ರಾಮೀಣ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತನ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:

error: Content is protected !!