ಅತಿ ವೇಗದ ಚಾಲನೆಯಿಂದ ಬೈಕ್ ನಿಯಂತ್ರಣ ತಪ್ಪಿ ಬ್ಯಾರಿಕೇಡ್‌ಗೆ ಗುದ್ದಿದ ಪರಿಣಾಮ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ವಿದ್ಯಾನಗರದಲ್ಲಿ ನಿನ್ನೆ ರಾತ್ರಿ ನಡೆದಿದೆ.

ಮೃತ ಯುವಕನನ್ನು ಉಣಕಲ್ ನಿವಾಸಿ ನಾಗು ಹಾಜೇರಿ ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ ಅತಿ ವೇಗದಲ್ಲಿ ಬೈಕ್ ಚಲಾಯಿಸುತ್ತಿದ್ದ ವೇಳೆ ಬೈಕ್ ನಿಯಂತ್ರಣ ತಪ್ಪಿ BRTS ಬ್ಯಾರಿಕೇಡ್‌ಗೆ ಗುದ್ದಿದ ಪರಿಣಾಮ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಉತ್ತರ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
