BELAGAVI

ಅಡುಗೆ ಅನಿಲದ ಬೆಲೆ ಏರಿಸಿದ ಬಿಜೆಪಿ ಸರ್ಕಾರ…

Share

ಮಹಿಳಾ ದಿನಾಚರಣೆಯಂದೇ ಅಡುಗೆ ಅನಿಲ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದಿದ್ದಾರೆ. ಬೆಳಗಾವಿ ನಗರ ಮತ್ತು ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಘಟಕಗಳ ವತಿಯಿಂದ ಆರ್.ಟಿ.ಓ ವೃತ್ತದ ಬಳಿ ತಲೆ ಮೇಲೆ ಖಾಲಿ ಸಿಲಿಂಡರ್ ಹೊತ್ತು ವಿನೂತನ ಪ್ರತಿಭಟನೆ ನಡೆಸಿ, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು.
ಬೆಳಗಾವಿ ನಗರ ಗ್ರಾಮೀಣ ಜಿಲ್ಲಾ ಕಾಂಗ್ರೆಸ್’ನ ವತಿಯಿಂದ ಅಡುಗೆ ಅನಿಲ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಬೆಳಗಾವಿ ನಗರದ ಆರ್.ಟಿ.ಓ ವೃತ್ತದ ಬಳಿಯಿರುವ ಕಾಂಗ್ರೆಸ್ ಭವನದ ಬಳಿ ಪ್ರತಿಭಟನೆಯನ್ನು ನಡೆಸಲಾಯಿತು. ಕೇಂದ್ರ ಸರ್ಕಾರದ ನೀತಿಯನ್ನು ಖಂಡಿಸಿ ತಲೆಯ ಮೇಲೆ ಖಾಳಿ ಸಿಲಿಂಡರ್ ಹೊತ್ತು ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು.

ಮಹಿಳಾ ದಿನಾಚರಣೆಯ ದಿನವೇ ಬಿಜೆಪಿ ಕೇಂದ್ರ ಸರ್ಕಾರ ಮಹಿಳೆಯರಿಗೆ ಶಾಕ್ ನೀಡಿದೆ. ಅಡುಗೆ ಅನಿಲದ ಬೆಲೆಯನ್ನು ಏರಿಸುವ ಮೂಲಕ ಕೇಂದ್ರ ಸರ್ಕಾರ ಮಹಿಳೆಯರ ಅಡುಗೆ ಮನೆಯ ಬಜೆಟ್ ಬಿಗಡಾಯಿಸಿದೆ. ಇದರಿಂದ ಸಾಮಾನ್ಯ ಜನರಿಗೆ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರಕ್ಕೆ ಜನರೇ ಮುಂಬರುವ ದಿನಗಳಲ್ಲಿ ತಕ್ಕ ಉತ್ತರ ನೀಡಲಿದ್ದಾರೆ. ಬೆಲೆ ಇಳಿಕೆಯಾಗುವವರೆಗೂ ಮಹಿಳಾ ಕಾಂಗ್ರೆಸ್ ಉಗ್ರ ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಕೆಯನ್ನು ನೀಡಿದರು.

ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ್ ನಾವಲಗಟ್ಟಿ ಅವರು ಏಕಾಏಕಿ ಕೇಂದ್ರದ ಅಡುಗೆ ಅನಿಲ ಬೆಲೆ ಏರಿಕೆಯಿಂದ ಜನ ಸಾಮಾನ್ಯರು ಮತ್ತು ಹೊಟೇಲ್ ಉದ್ಯಮಿಗಳು ಸಂಕಷ್ಟಕ್ಕಿಡಾಗಿದ್ದಾರೆ. ಜನರ ಹೊಟ್ಟೆ ಮೇಲೆ ಬರೆ ಏಳೆಯುವ ಕೆಲಸವನ್ನು ಪಿಎಂ ಮೋದಿ ನೇತೃತ್ವದ ಸರ್ಕಾರ ಮಾಡುತ್ತಿದೆ. ವಿದೇಶಿ ನಾಯಕರ ಮಾತಿಗೆ ಮಣೆ ಹಾಕುತ್ತ ಪಿಎಂ ಮೋದಿ ದೇಶದಲ್ಲಿ ಇಂತಹ ಪರಿಸ್ಥಿತಿಯನ್ನು ತಂದೊಡ್ಡಿದ್ದಾರೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗಿಯಾಗಿದ್ಧರು. ದೇಶದಲ್ಲಿ ಅಡುಗೆ ಅನಿಲ ಬೆಲೆ ಏರಿಕೆ ದೊಡ್ಡ ಸಮಸ್ಯೆಯಾದರೂ ಬೆಳಗಾವಿಯಲ್ಲಿ ಇದನ್ನ ಖಂಡಿಸಿ ಕಾಂಗ್ರೆಸ್ ಕೈಗೊಂಡ ಪ್ರತಿಭಟನೆ ಕೇವಲ ಕಾಂಗ್ರೆಸ್ ಭವನಕ್ಕೆ ಸೀಮಿತವಾಗಿ ಉಳಿಯಿದಿದ್ದು, ಎಷ್ಟರ ಮಟ್ಟಿಗೆ ಸರಿ ಎಂಬ ಪ್ರಶ್ನೆಗಳು ಕೇಳಿಬರುತ್ತಿವೆ.

Tags:

error: Content is protected !!