ಬೆಳಗಾವಿ ಜಿಲ್ಲೆಯ ಹಂದಿಗನೂರು ಗ್ರಾಮದಲ್ಲಿ ಶ್ರೀ ಲಕ್ಷ್ಮಿ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಮಂಟಪ ಪೂಜೆ ನೆರವೇರಿತು. ಸಚಿವ ಸತೀಶ್ ಜಾರಕಿಹೊಳಿ, ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹಾಗೂ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಈ ಶುಭ ಕಾರ್ಯ ಜರುಗಿತು.

ಸಚಿವ ಸತೀಶ್ ಜಾರಕಿಹೊಳಿ, ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಮತ್ತು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರ ಆದೇಶದಂತೆ, ಸಚಿವರ ಆಪ್ತ ಸಹಾಯಕರು ಹಾಗೂ ಕೆಪಿಸಿಸಿ ಸದಸ್ಯರಾದ ಮಲ್ಲಗೌಡ ಪಾಟೀಲ ಅವರು ಹಂದಿನೂರು ಗ್ರಾಮದಲ್ಲಿ ಶ್ರೀ ಲಕ್ಷ್ಮಿ ದೇವಿಯ ಜಾತ್ರೆಯ ನಿಮಿತ್ತ ಮಂಟಪ ಪೂಜೆಯನ್ನು ನೆರವೇರಿಸಿ ಚಾಲನೆ ನೀಡಿದರು. ಜಾತ್ರೆಯು ಅತ್ಯಂತ ಭಕ್ತಿ-ಭಾವದಿಂದ ನಡೆಯುತ್ತಿದ್ದು,

ಗ್ರಾಮಸ್ಥರಲ್ಲಿ ಸಂಭ್ರಮ ಮನೆಮಾಡಿದೆ.
ಈ ಕಾರ್ಯಕ್ರಮದಲ್ಲಿ ದೇವಾಲಯ ಸಮಿತಿಯ ಪದಾಧಿಕಾರಿಗಳು, ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು ಭಾಗವಹಿಸಿದ್ದರು. ಗ್ರಾಮದ ಹಿರಿಯರು ಹಾಗೂ ಅಪಾರ ಸಂಖ್ಯೆಯ ಭಕ್ತಾದಿಗಳು ಉಪಸ್ಥಿತರಿದ್ದು, ಧಾರ್ಮಿಕ ವಿಧಿ-ವಿಧಾನಗಳಲ್ಲಿ ಪಾಲ್ಗೊಂಡರು. ಜಾರಕಿಹೊಳಿ ಕುಟುಂಬದವರ ಜನಪರ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ಮೇಲಿನ ಗೌರವವನ್ನು ಈ ಸಂದರ್ಭದಲ್ಲಿ ಗ್ರಾಮಸ್ಥರು ಶ್ಲಾಘಿಸಿದರು

