ವಿಜಯಪುರ ನಗರದಲ್ಲಿ ಏಪ್ರಿಲ್ 11 ರಿಂದ 14ರವರೆಗೆ ಮೂರು ದಿನಗಳ ಕಾಲ ನಡೆಯಲಿರುವ ಅಂಬೇಡ್ಕರ್ ಹಬ್ಬ ಕಾರ್ಯಕ್ರಮದ ಪೋಸ್ಟರ್ ಅನ್ನು ದಲಿತ ವಿದ್ಯಾರ್ಥಿ ಪರಿಷತ್ ರಾಜ್ಯಧ್ಯಕ್ಷ ಶ್ರೀನಾಥ್ ಪೂಜಾರಿ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜಿಲ್ಲೆಯ ಯುವಕ-ಯುವತಿಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು. ಇನ್ನೂ ವೇದ ಅಕಾಡೆಮಿಯ ಅಧ್ಯಕ್ಷ ಶಿವಾನಂದ ಕೆಲೂರ ಅವರು, ಏಪ್ರಿಲ್ 11 ರಿಂದ 14ರ ವರೆಗೆ ನಡೆಯಲಿರುವ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಹಬ್ಬ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಾಗವಹಿಸಬೇಕು ಎಂದು ಮನವಿ ಮಾಡಿದರು. ಈ ಬಾರಿ ಅಂಬೇಡ್ಕರ್ ಹಬ್ಬವನ್ನು ಅರ್ಥಪೂರ್ಣವಾಗಿ, ಅಚ್ಚುಕಟ್ಟಾಗಿ ಮತ್ತು ಯಶಸ್ವಿಯಾಗಿ ಆಚರಿಸಲು ವಿದ್ಯಾರ್ಥಿಗಳ ಸಹಕಾರ ಅತ್ಯಗತ್ಯ ಎಂದು ಅವರು ಹೇಳಿದರು.

