Vijaypura

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಲಾರಿ: ಚಾಲಕನಿಗೆ ಗಂಭೀರ ಗಾಯ

Share

ಲಾರಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಪರಿಣಾಮ ಚಾಲಕನಿಗೆ ಗಂಭೀರ ಗಾಯಗಳಾದ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಹೊರಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಕಲಬುರ್ಗಿಯಿಂದ ವಿಜಯಪುರಕ್ಕೆ ಸಿಮೆಂಟ್ ತುಂಬಿಕೊಂಡು ಬರುತ್ತಿದ್ದ ಲಾರಿ ರಸ್ತೆ ಬದಿಯ ಕಂದಕಕ್ಕೆ ಪಲ್ಟಿ ಹೊಡೆದಿದೆ. ಗಾಯಗೊಂಡ ಚಾಲಕನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಿಂದಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Tags:

error: Content is protected !!