ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಹಾಗೂ ಬೆಲೆ ಇಳಿಸುವಂತೆ ಆಗ್ರಹಿಸಿ, ಧಾರವಾಡದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ಹೊರಹಾಕಿದರು.

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಧಾರವಾಡ ಗ್ರಾಮೀಣ ಜಿಲ್ಲಾ ಘಟಕದ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಯುವ ಸಮಿತಿಯ ಕಾರ್ಯಕರ್ತರು ಕೇಂದ್ರ ಬಿಜೆಪಿ ವಿರುದ್ಧ ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಇಸ್ರೇಲ್ ಅಮೆರಿಕಾ ಹಾಗೂ ಇರಾನ ದೇಶಗಳ ನಡುವೆ ಯುದ್ಧ ನಡೆಯುತ್ತಿದೆ. ಈ ಸಂದರ್ಭದಲ್ಲಿ ಗ್ಯಾಸ ಅಭಾವ ಉಂಟಾಗಿದೆ, ಇಲ್ಲಿ ಕೇಂದ್ರ ಸರ್ಕಾರದ ಸ್ಪಷ್ಟ ನಿರ್ಲಕ್ಷ್ಯ ಎದ್ದು ಕಾಣುತ್ತದೆ. ಇದರ ಜತೆಗೆ ಈಗ ಸಲಿಂಡರ್ ಬೆಲೆ ಏಕಾಏಕಿ ಏರಿಕೆ ಮಾಡಿದ್ದಾರೆ. ಇದರಿಂದ ಮಧ್ಯಮ ವರ್ಗದ ಜನರು ಜೀವನ ಸಂಕಷ್ಟಕ್ಕೆ ಸಿಲುಕಿತ್ತದೆ. ಕೇಂದ್ರ ಸರ್ಕಾರ ಬೆಲೆ ಏರಿಕೆ ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಈ ಕೂಡಲೇ ಕೇಂದ್ರ ಸರ್ಕಾರ ಬೆಕೆ ಏರಿಕೆ ನಿಂತ್ರಿಸುವುದರ ಜತೆಗೆ ಸಿಲಿಂಡರ್ ಬೆಲೆ ಏರಿಕೆ ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿದರು. ಇಲ್ಲವಾದಲ್ಲಿ ಬರುವ ದಿನಗಳಲ್ಲಿ ರಾಜ್ಯವ್ಯಾಪಿ ಹೋರಾಟಕ್ಕೆ ಯುವ ಕಾಂಗ್ರೆಸ್ ಸಮಿತಿ ಹೋರಾಟಕ್ಕೆ ಮುಂದಾಗುತ್ತದೆ ಎಂದು ಖಡಕ್ ಎಚ್ಚರಿಕೆ ನೀಡಿದರು.
