Savadatti

ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ದಾಖಲೆ ಕಾಣಿಕೆ: 3.07 ಕೋಟಿ ರೂಪಾಯಿ ಸಂಗ್ರಹ

Share

ದಕ್ಷಿಣ ಭಾರತದ ಪ್ರಸಿದ್ಧ ಪುಣ್ಯಕ್ಷೇತ್ರ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ಭಕ್ತರ ಹರಿವು ಹೆಚ್ಚಾದಂತೆ ದೇವಿಯ ಕಾಣಿಕೆಯೂ ದಾಖಲೆ ಬರೆದಿದೆ. ಕಳೆದ ನಾಲ್ಕು ದಿನಗಳಲ್ಲಿ ನಡೆದ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಕೋಟಿ ಕೋಟಿ ಹಣ ಹಾಗೂ ಕೆಜಿಗಟ್ಟಲೆ ಚಿನ್ನಾಭರಣ ಸಂಗ್ರಹವಾಗಿದೆ.

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೊರವಲಯದಲ್ಲಿರುವ ಐತಿಹಾಸಿಕ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಈ ಬಾರಿ ದಾಖಲೆ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ. ಕಳೆದ ಮಾರ್ಚ್ 9 ರಿಂದ 12 ರವರೆಗೆ ನಡೆದ ಹುಂಡಿ ಎಣಿಕೆ ಕಾರ್ಯವು ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಒಟ್ಟು 3.07 ಕೋಟಿ ರೂಪಾಯಿ ಮೌಲ್ಯದ ಕಾಣಿಕೆ ಸಂಗ್ರಹವಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ. ಕಳೆದ ವಾರವಷ್ಟೇ ಒಂದು ಸುತ್ತಿನ ಎಣಿಕೆ ಕಾರ್ಯ ನಡೆದಿದ್ದರೂ ಸಹ, ಈ ಬಾರಿಯ ಎಣಿಕೆಯಲ್ಲಿ ಭಾರಿ ಪ್ರಮಾಣದ ನಗದು ಹಾಗೂ ಆಭರಣಗಳು ಹರಿದು ಬಂದಿರುವುದು ಭಕ್ತರ ಅಚಲ ಭಕ್ತಿಗೆ ಸಾಕ್ಷಿಯಾಗಿದೆ.
ಸಂಗ್ರಹವಾದ ಒಟ್ಟು ಮೊತ್ತದ ವಿವರವನ್ನು ಗಮನಿಸಿದರೆ, ಭಕ್ತರು ಅರ್ಪಿಸಿದ ನಗದು ರೂಪದ ಕಾಣಿಕೆಯೇ ಸಿಂಹಪಾಲನ್ನು ಹೊಂದಿದೆ. ಒಟ್ಟು 2.78 ಕೋಟಿ ರೂಪಾಯಿ ನಗದು ಹಣದ ಜೊತೆಗೆ, 16.16 ಲಕ್ಷ ರೂಪಾಯಿ ಮೌಲ್ಯದ 100 ಗ್ರಾಂ ಚಿನ್ನಾಭರಣ ಹಾಗೂ 12.35 ಲಕ್ಷ ರೂಪಾಯಿ ಬೆಲೆಯ ಸುಮಾರು 4 ಕೆಜಿ 547 ಗ್ರಾಂ ಬೆಳ್ಳಿ ಆಭರಣಗಳು ಸಂಗ್ರಹವಾಗಿವೆ. ಈ ಬೃಹತ್ ಎಣಿಕೆ ಕಾರ್ಯದಲ್ಲಿ ದೇವಸ್ಥಾನದ ನೂರಾರು ಸಿಬ್ಬಂದಿಯೊಂದಿಗೆ ಸ್ಥಳೀಯ ಕಾಲೇಜು ವಿದ್ಯಾರ್ಥಿಗಳು ಸಹ ಉತ್ಸಾಹದಿಂದ ಭಾಗವಹಿಸಿ ಪಾರದರ್ಶಕವಾಗಿ ಕಾರ್ಯ ನಿರ್ವಹಿಸಿದರು.

ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದ್ದು, ಈ ಸಂಗ್ರಹವಾದ ಕಾಣಿಕೆ ಹಣವನ್ನು ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಬಳಸಿಕೊಳ್ಳಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಈ ಬೃಹತ್ ಎಣಿಕೆ ಕಾರ್ಯದಲ್ಲಿ ದೇವಸ್ಥಾನದ ನೂರಾರು ಸಿಬ್ಬಂದಿಯೊಂದಿಗೆ ಸ್ಥಳೀಯ ಕಾಲೇಜು ವಿದ್ಯಾರ್ಥಿಗಳು ಸಹ ಉತ್ಸಾಹದಿಂದ ಭಾಗವಹಿಸಿ ಪಾರದರ್ಶಕವಾಗಿ ಕಾರ್ಯ ನಿರ್ವಹಿಸಿದರು. BYTE

ಮುಖ್ಯವಾಗಿ ಭಕ್ತರಿಗೆ ಕುಡಿಯುವ ನೀರು, ವಸತಿ ಸೌಕರ್ಯ, ಶೌಚಾಲಯ ಹಾಗೂ ದೇವಸ್ಥಾನದ ಆವರಣದ ಸೌಂದರ್ಯೀಕರಣದಂತಹ ಮೂಲಸೌಕರ್ಯ ಕಾಮಗಾರಿಗಳಿಗೆ ಈ ಹಣವನ್ನು ವಿನಿಯೋಗಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Tags:

error: Content is protected !!