Vijaypura

ಕಾ‌ರ್ ಪಲ್ಟಿ ; ಸ್ಥಳದಲ್ಲಿ ಇಬ್ಬರು ಸಾವು; ಇಬ್ಬರಿಗೆ ಗಾಯ

Share

ಕಾಗವಾಡದಿಂದ ಶ್ರೀಶೈಲಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದ ಬಸವನ ಹಟ್ಟಿ ಕ್ರಾಸ್ ಬಳಿ ರಾಜ್ಯ ಬಿಜ್ಜಳ ಹೆದ್ದಾರಿಯಲ್ಲಿ ನಡೆದಿದೆ. ಮೃತ ದುರ್ದೈವಿಗಳನ್ನು ಚಂದ್ರವ್ವ ಟಕ್ಕೆನ್ನವರ (70) ಮತ್ತು ಕಾಮಪ್ಪ ಅವರಾದಿ (65) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡಿದ್ದು, ಅವರನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಬಸವನಬಾಗೇವಾಡಿ ಪಿಐ ಗುರುಶಾಂತ ದಾಶ್ಯಾಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಬಸವನಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣ ದಾಖಲಾಗಿದೆ‌.

Tags:

error: Content is protected !!