Vijaypura

ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಪ್ರತಿಭಟನೆ

Share

ಸಾಮಾಜಿಕ ಜಾಲತಾಣದಲ್ಲಿ ಬಸವಣ್ಣ ಹಾಗೂ ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ವ್ಯಕ್ತಿಯ ನಡೆ ಖಂಡಿಸಿ ವಿಜಯಪುರದಲ್ಲಿ ಬಸವಾದಿ ಶರಣರ ಅಭಿಮಾನಿಗಳು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಕೂಡಲೇ ಆರೋಪಿಯನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕೆಂದು ಮನವಿ ಮಾಡಿದರು. ತಪ್ಪಿದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಪಂಚಮಸಾಲಿ ಸಮಾಜದ ಮುಖಂಡ ವಿದ್ಯಾರಾಣಿ ತುಂಗಳ ಮಾತನಾಡಿ ಸಾಮಾಜಿಕ ಜಾಲತಾಣದಲ್ಲಿ ಜಗಜ್ಯೋತಿ ಬಸವಣ್ಣನವರ ಹಾಗೂ ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದವರನ್ನು ಸರ್ಕಾರ ಕೂಡಲೇ ಬಂಧಿಸಿ, ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಎಚ್ಚರಿಕೆ ನೀಡಿದ್ದಾರೆ. ತಪ್ಪಿದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

Tags:

error: Content is protected !!