ನಾಳೆ ರವಿವಾರ ದಿನಾಂಕ
ಮಾರ್ಚ್ 15 ರಂದು ವಿಜಯಪುರ ನಗರದಲ್ಲಿ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿ ವತಿಯಿಂದ ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿಜಯಪುರದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ್ ಲೋಣಿ ತಿಳಿಸಿದರು. ಮಾದ್ಯಮಗೊಷ್ಟಿಯಲ್ಲಿ ಮಾತನಾಡಿದ ಅವರು ಈ ಕಾರ್ಯಕ್ರಮವು ಸಚಿವ ವಿನಯ್ ಕುಮಾರ್ ಸೋರಕೆ ಅವರ ನೇತೃತ್ವದಲ್ಲಿ ನಡೆಯಲಿದ್ದು, ಸಚಿವರಾದ ಎಂ.ಬಿ.ಪಾಟೀಲ, ಶಿವಾನಂದ ಪಾಟೀಲ ಸೇರಿದಂತೆ ಶಾಸಕರು ಕಾರ್ಯಕರ್ತರು, ಮುಖಂಡರು, ಬಾಗಲಕೋಟ ಶಾಸಕರು ಮತ್ತು ಸಚಿವರು ಭಾಗವಹಿಸಲಿದ್ದಾರೆ. ಕಾರಣ ಕಾರ್ಯಕ್ರಮ ಯಶಸ್ವಿಯಾಗಿಸಲು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಎಂದು ಅವರು ಮನವಿ ಮಾಡಿದರು.

