Athani

ಧರ್ಮಸ್ಥಳ ಸಂಸ್ಥೆಯಿಂದ ವಾತ್ಸಲ್ಯ ಮನೆ ಹಸ್ತಾಂತರ

Share

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಗ್ರಾಮಸ್ವರಾಜ್ಯದ ಕನಸು ನನಸು ಮಾಡುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಈ ನಿಟ್ಟಿನಲ್ಲಿ ಮನೆಯಿಲ್ಲದ ಫಲಾನುಭವಿಗಳಿಗೆ ಜ್ಞಾನವಿಕಾಸ ವಿಭಾಗದಿಂದ ಮನೆ ಕಟ್ಟಿಕೊಡ ಲಾಗುತ್ತಿದೆ ಎಂದು ಯೋಜನೆಯ ಜಿಲ್ಲಾ ನಿರ್ದೇಶಕಿ ನಾಗರತ್ನ ಹೆಗಡೆ ಹೇಳಿದರು.

ತಾಲೂಕಿನ ರಡ್ಡೇರಹಟ್ಟಿ ಗ್ರಾಮದಲ್ಲಿ ಗಿರಿಮಲ್ಲ ಬಸಪ್ಪ ಚಿಗರಿ ಎಂಬ ಫಲಾನುಭವಿಗೆ ವಾತ್ಸಲ್ಯ ಮನೆ ಹಸ್ತಾಂತರಿಸಿ ಮಾತನಾಡಿದರು.
ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ವೀರೇಂದ್ರ ಹೆಗಡೆಯವರ ಮಾರ್ಗದರ್ಶನದಲ್ಲಿ ಗ್ರಾಮೀಣ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನ ಗೊಳಿಸಲಾಗುತ್ತದೆ. ಹಾಗೂ ಅಂತರ್ಜಲ ಮಟ್ಟ ಹೆಚ್ಚಿಸುವ ಕುರಿತು ಒಂದು ಸಾವಿರ ಕೆರೆಗಳನ್ನು ಸಹಾ ಜೀರ್ಣೋದ್ಧಾರ ಮಾಡಲಾಗುತ್ತಿದೆ ಹಾಗೂ ಇನ್ನು ಹಲವಾರು ಕಾರ್ಯಕ್ರಮಗಳನ್ನು ಧರ್ಮಸ್ಥಳ ಸಂಸ್ಥೆಯೂ ಮಾಡುತ್ತಿದೆ ಎಂದು ಜಿಲ್ಲಾ ನಿರ್ದೇಶಕಿ ನಿರ್ದೇಶಕಿ ನಾಗರತ್ನ ಹೆಗಡೆ ಹೇಳಿದರು.

Tags:

error: Content is protected !!