Nandagad

ನಂದಗಡದಲ್ಲಿ ಭೀಕರ ರಸ್ತೆ ಅಪಘಾತ: ದೈವವಶಾತ್ ಪ್ರಾಣಾಪಾಯದಿಂದ ಪಾರಾದ ಇಬ್ಬರು ಯುವಕರು

Share

ನಂದಗಡ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಪವಾಡಸದೃಶವಾಗಿ ಪಾರಾಗಿದ್ದಾರೆ.


ನಂದಗಡ ಸಮೀಪದ ಮುಖ್ಯ ರಸ್ತೆಯಲ್ಲಿ ಬುಲೆರೋ ಮತ್ತು ಮೋಟಾರ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಭೀಕರ ಅಪಘಾತ ಉಂಟಾಗಿದೆ. ಈ ಘಟನೆಯಲ್ಲಿ ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡರಾದರೂ, ಅದೃಷ್ಟವಶಾತ್ ಇಬ್ಬರೂ ಯುವಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ದೌಡಾಯಿಸಿದ ನಂದಗಡ ಪೊಲೀಸರು, ಸ್ಥಳೀಯರ ನೆರವಿನೊಂದಿಗೆ ಕೂಡಲೇ ಗಾಯಾಳುಗಳನ್ನು ಖಾನಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಈ ಕುರಿತು ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

Tags:

error: Content is protected !!