ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತಾದ ಚರ್ಚೆಗಳಿಗೆ ಪ್ರತಿಕ್ರಿಯಿಸಿ, ”ಸಿಎಂ ಬದಲಾವಣೆ ವಿಚಾರ ಹೈಕಮಾಂಡ್‌ಗೆ ಬಿಟ್ಟದ್ದು” ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ. ವಿಜಯಪುರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ ಅಥವಾ ಜೂನ್‌ನಲ್ಲಿ ಸಚಿವ ಸಂಪುಟ ಪುನಾರಚನೆಯಾಗಲಿದ್ದು, ಶೇ. 50ರಷ್ಟು ಹೊಸಬರಿಗೆ ಅವಕಾಶ ನೀಡುವಂತೆ ಒತ್ತಾಯಿಸಿದರು. ಸರ್ಕಾರದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನಡುವೆ ಯಾವುದೇ ಗೊಂದಲವಿಲ್ಲ, ಆಡಳಿತ ಸುಸೂತ್ರವಾಗಿ ನಡೆಯುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು. ಇನ್ನೂ ಪಂಚ ರಾಜ್ಯಗಳ ಚುನಾವಣೆ ನಂತರ ನಮ್ಮ ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಇದೆ ಎಂದರು. ಇನ್ಬೂ ಮೇ ತಿಂಗಳಲ್ಲಿ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಯಲಿದೆ. ಇದರ ಬಳಿಕ ಸಂಪುಟ ವಿಸ್ತರಣೆಯ ವಿಶ್ವಾಸ ಇದೆ. ಈ ವೇಳೆ ಶೇ.50ರಷ್ಟು ಹೊಸಬರಿಗೆ ಸಂಪುಟದಲ್ಲಿ ಅವಕಾಶ ಕೊಡಬೇಕು ಎಂಬ ಬೇಡಿಕೆ ಇದೆ ಎಂದು ಹೇಳಿದರು. ಇದೇ ವೇಳೆ, ಅಧಿಕಾರ ಹಂಚಿಕೆ ಹಾಗೂ ಸಿಎಂ ವಿಚಾರದಲ್ಲಿ ಪಕ್ಷದ ವರಿಷ್ಠರು ಅಂತಿಮ ತೀರ್ಮಾನ ಮಾಡಲಿದ್ದಾರೆ.

ನಮ್ಮಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 2.9 ವರ್ಷವಾಗಿದೆ. ನಮ್ಮದು ನುಡಿದಂತೆ ನಡೆದ ಸರ್ಕಾರ. ಐದು ಗ್ಯಾರಂಟಿಗಳ ಅನುಷ್ಠಾನದೊಂದಿಗೆ ಆರನೇ ಗ್ಯಾರಂಟಿಯಾಗಿ 2.20 ಲಕ್ಷ ಜನರಿಗೆ ಹಕ್ಕು ಪತ್ರಗಳ ವಿತರಣೆ ಮಾಡಲಾಗಿದೆ ಎಂದರು. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು 12 ವರ್ಷಗಳಾಗಿವೆ. ಆದರೆ, ಬಿಜೆಪಿ ಸರ್ಕಾರ ಮಾತಿಗೆ ತಪ್ಪಿದ ಸರ್ಕಾರವಾಗಿದೆ. 15 ಲಕ್ಷ ರೂ. ಕೊಡಲಿಲ್ಲ, 2 ಕೋಟಿ ಉದ್ಯೋಗ ಸೃಷ್ಟಿ ಮಾಡಲಿಲ್ಲ. ಬೆಲೆ ಏರಿಕೆ ನಿಯಂತ್ರಣ ಮಾಡಲಿಲ್ಲ. ಹೀಗಾಗಿ ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಯವರಿಗೆ ಇಲ್ಲ ಎಂದರು. ಮೋದಿ ಸರ್ಕಾರ ಮಾಡಿರುವ ಸಾಲದ ಬಗ್ಗೆ ಬಿಜೆಪಿಯವರು ಚರ್ಚೆ ಮಾಡಲ್ಲ. ಅದನ್ನು ಯಾಕೆ ಪ್ರಶ್ನೆ ಮಾಡಲ್ಲ?, ರಾಜ್ಯದ ಸಾಲದಲ್ಲಿ ಯಾವುದೇ ನಿಯಮಗಳನ್ನು ಮೀರಿಲ್ಲ ಎಂದು ಹೇಳಿದರು.
