ಕರ್ನಾಟಕದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿಗಳು, ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಿಲಿಂಡರ್ ಅಭಾವ ನೀಗಿಸಲು ರಾಜ್ಯ ಸರ್ಕಾರ ಪತ್ರ ಬರೆದಿದೆ. ಆದರೇ ಕೇಂದ್ರ ಮಲತಾಯಿ ಧೋರಣೆ ತೋರುತ್ತಿದೆ ಎಂದು ಬಿಜೆಪಿ ನಾಯಕರ ಹೇಳಿಕೆಗೆ ಖಾರವಾಗಿ ತಿರುಗೇಟು ನೀಡಿದ್ದಾರೆ.

ಇಂದು ಬೆಂಗಳೂರಿನಲ್ಲಿ ಮಾಧ್ಯಮಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯ ಸರ್ಕಾರದ ವತಿಯಿಂದ ವಿಧಾನಸಭೆ ಮತ್ತು ಪರಿಷತ್ತಿನಲ್ಲಿ ಚರ್ಚೆಯಾಗಿದೆ. ರಾಜ್ಯದಲ್ಲಿ ತಲೆದೋರಿರುವ ಸಿಲಿಂಡರ್ ಅಭಾವವನ್ನು ನೀಗಿಸಿಲು ಬೇರೆ ಮೂಲಗಳಿಂದ ಸಿಲಿಂಡರ್ ತರೆಸಲು ಕೇಂದ್ರಕ್ಕೆ ಪತ್ರವನ್ನು ಬರೆಯಲಾಗಿದೆ. ಹೊಟೇಲ್’ಗಳ ಮೇಲೆ ಹಲವು ಅವಲಂಬಿತರಾಗಿದ್ದಾರೆ. ಅವುಗಳಿಗೆ ವಾಣಿಜ್ಯ ಸಿಲಿಂಡರ್ ನಿಲ್ಲಿಸದರೇ ತೊಂದರೆಯಾಗುತ್ತದೆ. ಕೇಂದ್ರ ಇಂಧನ ಸಚಿವರು ಸಮಸ್ಯೆಯನ್ನು ಬಗೆಹರಿಸುವ ಭರವಸೆ ನೀಡಿದ್ದು, ಅದನ್ನ ಕೂಡಲೇ ಬಗೆಹರಿಸಲಿ ಎಂದರು.
ಇನ್ನು ಬೇರೆ ರಾಜ್ಯದಲ್ಲಿ ಎಲ್.ಪಿ.ಜಿ ಸಮಸ್ಯೆಯಿಲ್ಲ. ಕರ್ನಾಟಕದಲ್ಲೇ ಇದೆ ಎಂಬ ರಾಜ್ಯ ಬಿಜೆಪಿ ನಾಯಕರ ಆರೋಪಕ್ಕೆ ಖಾರವಾಗಿ ಪ್ರತಿಕ್ರಿಯಿಸಿದ ಸಿಎಂ, ಅವರೇ ರಾಜ್ಯಕ್ಕೆ ಸರಬರಾಜು ಮಾಡಲಿ. ಹಾಗಾದರೇ, ಬಿಜೆಪಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದೆ ಎಂದರು.
